ನವದೆಹಲಿ prajakiran.com : ದೇಶದಲ್ಲಿ ಕೊರೋನಾಗೆ ತುತ್ತಾಗುವವರ ಸಂಖ್ಯೆ ಹೆಚ್ಚುತ್ತಲೇ ಇದೆ.
ಕಳೆದ 24 ಗಂಟೆಯಲ್ಲಿ 2,73,810 ಹೊಸ ಕೊರೋನಾ ಪ್ರಕರಣಗಳು ದಾಖಲಾಗಿವೆ.
ಆರೋಗ್ಯ ಸಚಿವಾಲಯದ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,73,810 ಹೊಸ ಪ್ರಕರಣಗಳು ಕಂಡುಬಂದಿದ್ದು, ಸೋಂಕಿತರ ಸಂಖ್ಯೆ 1,50,61,919 ರಷ್ಟು ಹೆಚ್ಚಾಗಿದೆ.
1,44,178 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಒಟ್ಟು 1,29,53,821 ಮಂದಿ ಗುಣಮುಖರಾಗಿದ್ದಾರೆ.
ಭಾನುವಾರ ಒಂದೇ ದಿನದಲ್ಲಿ ದೇಶಾದ್ಯಂತ 1,619 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,78,769 ಕ್ಕೆ ಏರಿಕೆಯಾಗಿದೆ.