ಧಾರವಾಡ prajakiran.com : ಕೋವಿಡ್ ನಿಂದ ಗುಣಮುಖರಾಗಿರುವ 4 ಜನರನ್ನು ಹುಬ್ಬಳ್ಳಿಯ ಕಿಮ್ಸ್ ನಿಂದ ಬಿಡುಗಡೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್ ತಿಳಿಸಿದ್ದಾರೆ.
ಪಿ- 7034 (36 ವರ್ಷ,ಪುರುಷ), ಪಿ-5828 (68 ವರ್ಷ, ಪುರುಷ), ಪಿ- 7825 ( 5 ವರ್ಷ,ಗಂಡು ಮಗು), ಪಿ-7826 ( 28 ವರ್ಷ,ಪುರುಷ) ಕರೋನಾ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಆ ಮೂಲಕ ಧಾರವಾಡ ಜಿಲ್ಲೆಯಲ್ಲಿ ಇದುವರೆಗೆ 159 ಜನ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ ಎಂದು ಅವರು ವಿವರಿಸಿದ್ದಾರೆ.