ಅಂತಾರಾಷ್ಟ್ರೀಯ

ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆ : ಸಾವಿನ ಸಂಖ್ಯೆ 3,890ಕ್ಕೆ ಏರಿಕೆ

ನವದೆಹೆಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿನ್ನು ತಡೆಗಟ್ಟಲು ಹಲವಾರು ರಾಜ್ಯಗಳು ಲಾಕ್‌ಡೌನ್ ಜಾರಿಗೊಳಿಸಿವೆ.

ಈ ಹಿನ್ನೆಲೆ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 3,26,098 ಹೊಸ ಕೊರೋನಾ ಸೋಂಕಿತ ಪ್ರಕರಣಗಳು ವರದಿಯಾಗಿವೆ.

ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಯಲ್ಲಿ 3,26,098 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,43,72,907 ರಷ್ಟಾಗಿದೆ.

ಶುಕ್ರವಾರ ದೇಶದಲ್ಲಿ 3,53,299 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,04,32,898ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 36,73,802 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಶುಕ್ರವಾರ ದೇಶಾದ್ಯಂತ 3,890 ಮಂದಿ ಸೋಂಕಿಗೆ ಬಲಿಯಾಗಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,66,207 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *