ರಾಜ್ಯ

ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಂದೆಗೂ ಕರೋನಾ ಸೋಂಕು

ಬೆಂಗಳೂರು prajakiran.com : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಸಾಗಿರುವ 
 ಕರೋನಾ ವೈರಸ್ ಕರೋನಾ ಸೇನಾನಿಗಳಿಗೆ ಕಾಡಿದ ಬೆನ್ನಲ್ಲೇ 
ಇದೀಗ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಂದೆಗೂ ತಗುಲಿದೆ.
ಈ ಬಗ್ಗೆ ಸ್ವತಃ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರು ಟ್ವೀಟ್ ಮಾಡಿದ್ದು, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ.
ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ತಿಳಿಸಿದ್ದಾರೆ.




My father’s COVID19 test has come out positive. Anxiously waiting for reports of other family members. Praying for speedy recovery of my father.
ಇದೇ ವೇಳೆ ಸಚಿವರ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಕರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರನ್ನುಈಗಾಗಲೇ ನಿಗದಿತ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಸಚಿವರ ತಂದೆಯವರಿಗೆ ಕರೋನಾ ದೃಢಪಟ್ಟ ಬೆನ್ನಲ್ಲೇ ಸಚಿವರ ಪತ್ನಿ, ಮಕ್ಕಳು ಮತ್ತು ಎಲ್ಲ ಮನೆ ಕೆಲಸದವರನ್ನು ಹೋಂ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ ಎಂದು ತಿಳಿದುಬಂದಿದೆ.
ಕರೋನಾ ವೈರಸ್ ಯಾರನ್ನು ಬಿಡದೆ ಎಲ್ಲರನ್ನೂ ಕಾಡುತ್ತಿದೆ. ಇದು ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬುದು ಕಾದು ನೋಡಬೇಕು.




ಮಾಜಿ ಶಾಸಕರ ಮಗಳಿಗೂ ಸೋಂಕು :

ಮಾಗಡಿ ಮಾಜಿ ಶಾಸಕ ಬಾಲಕೃಷ್ಣ ಅವರ ಮಗಳಿಗೂ ಕರೋನಾ ಸೋಂಕು ಹರಡಿರುವುದು ದೃಢಪಟ್ಟಿದೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಬಾಲಕೃಷ್ಣ, ನನ್ನ ಮಗಳು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಯಾಗಿ ಕಾರ್ಯನಿರ್ವಹಿಸುತ್ತಿದ್ದಾಳೆ.

ಅವಳಿಗೆ ಎರಡುದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೋವಿಡ್ 19 ಪರೀಕ್ಷೆಗೆ ಒಳಪಡಿಸಿದಾಗ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ.

 




PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *