ನವದೆಹೆಲಿ prajakiran.com : ದೇಶದಲ್ಲಿ ಕೊರೋನಾ ಸೋಂಕು ಕೊಂಚ ನಿಯಂತ್ರಣಕ್ಕೆ ಬಂದಿದೆ. ನಿನ್ನೆ ಒಂದೇ ದಿನ 2,67,334 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ವರದಿ ಪ್ರಕಾರ, ನಿನ್ನೆ 2,67,334 ಸೋಂಕಿತರು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 2,54,96,330ಕ್ಕೆ ಏರಿಕೆಯಾಗಿದೆ.
ಸೋಂಕಿತರ ಪೈಕಿ 32,26,719 ಮಂದಿ ಸಕ್ರಿಯ ಸೋಂಕಿತರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೇ ಒಂದೇ ದಿನ 3,89,851 ಮಂದಿ ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,19,86,363ಕ್ಕೆ ಏರಿಕೆಯಾಗಿದೆ.
ಮಂಗಳವಾರ ಒಂದೇ ದಿನ 4,529 ಮಂದಿ ಸೋಂಕಿಗೆ ಬಲಿಯಾಗಿದ್ದು, ಈವರೆಗೂ 2,83,248 ಮಂದಿ ಮೃತಪಟ್ಟಿದ್ದಾರೆ.