ನವದೆಹಲಿprajakiran. com : ದೇಶದಲ್ಲಿ ಸೋಂಕಿತರ ಸಂಖ್ಯೆ ಮತ್ತೆ ಹೆಚ್ಚಾಗಿದೆ.
ಕಳೆದ 24 ಗಂಟೆಯಲ್ಲಿ 2,61,500 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ದೇಶದಲ್ಲಿ 2,61,500 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 1,47,88,109ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಾಹಿತಿಯ ನೀಡಿದೆ.
ಶನಿವಾರ ದೇಶದಲ್ಲಿ 1,38,423 ಕೊರೋನಾ ಸೋಂಕಿತರು ಗುಣಮುಖರಾಗಿದ್ದಾರೆ.
ಗುಣಮುಖರಾದವರ ಸಂಖ್ಯೆ 1,28,09,643ಕ್ಕೆ ಏರಿದೆ. ಸದ್ಯ ದೇಶದಲ್ಲಿ 18,01,316 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ದೇಶಾದ್ಯಂತ ಶನಿವಾರ 1,501 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ,
ಒಟ್ಟಾರೆಯಾಗಿ
ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,77,150ಕ್ಕೆ ಏರಿಕೆಯಾಗಿದೆ.