ರಾಜ್ಯ

ರಾಜ್ಯದಲ್ಲಿ ಭಾನುವಾರ ಕರೋನಾ ಸ್ಪೋಟ : 16 ಜನರ ಸಾವು, 1267 ಪ್ರಕರಣ ಪತ್ತೆ

ಬೆಂಗಳೂರು prajakiran.com : ರಾಜ್ಯದಲ್ಲಿ ಭಾನುವಾರವೂ ಮಹಾಮಾರಿ ಕರೋನಾ ಅಟ್ಟಹಾಸ ಮುಂದುವರೆದಿದ್ದು, ಇಂದು ಕೂಡ ವಿವಿಧ ಜಿಲ್ಲೆಗಳಲ್ಲಿ 16  ಜನ ಸಾವನ್ನಪ್ಪಿದ್ದಾರೆ.

ಮತ್ತೆ ಹೊಸದಾಗಿ 1267 ಜನರಿಗೆ ಸೋಂಕು ಹರಡಿದ್ದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ  13190 ಕ್ಕೆ ಏರಿಕೆಯಾಗಿದೆ.



 ಇಂದು ರಾಜ್ಯದಲ್ಲಿ  220  ಜನ ಬಿಡುಗಡೆಗೊಂಡಿದ್ದು, ಈವರೆಗೆ ಒಟ್ಟು 7507  ಜನ ಗುಣಮುಖರಾಗಿದ್ದು,  5472   ಸಕ್ರಿಯ ಪ್ರಕರಣಗಳಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  243 ಜನ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಕೋವಿಡ್ -19 ಸೋಂಕಿನಿಂದ ರಾಜ್ಯದಲ್ಲಿ ಭಾನುವಾರವೂ 16 ಜನ ಮೃತಪಟ್ಟಿದ್ದು, ಈವರೆಗೆ ಸಾವನ್ನಪ್ಪಿದ್ದವರ ಸಂಖ್ಯೆ 207ಕ್ಕೆ ಏರಿಕೆಯಾದಂತಾಗಿದೆ.

ಭಾನುವಾರ ಪತ್ತೆಯಾದ 1267 ಪ್ರಕರಣಗಳಲ್ಲಿ ರಾಜ್ಯದ ರಾಜಧಾನಿ ಬೆಂಗಳೂರು ನಗರ ದಲ್ಲಿಯೇ ಅತಿ ಹೆಚ್ಚು ಸೋಂಕಿತರು ಕಂಡು ಬಂದಿದ್ದಾರೆ.



ನಿನ್ನೇ 596 ಸೋಂಕಿತರನ್ನು ಕಂಡಿದ್ದ ಬೆಂಗಳೂರು ಇಂದು ಬರೋಬ್ಬರಿ 783 ಜನ ಸೋಂಕಿತರು ಕಂಡು ಬಂದಿರುವುದು ಬೆಂಗಳೂರಿಗರನ್ನು ಮತ್ತೆ ಬೆಚ್ಚಿಬೀಳಿಸುವಂತೆ ಮಾಡಿದೆ.

 ಇನ್ನೂಳಿದಂತೆ  ದಕ್ಷಿಣ ಕನ್ನಡ 97, ಬಳ್ಳಾರಿ 71, ಉಡುಪಿ 40, ಕಲಬುರಗಿ 34, ಹಾಸನ 31, ಗದಗ 30, ಬೆಂಗಳೂರು ಗ್ರಾಮಾಂತರ 27, ಧಾರವಾಡ ಹಾಗೂ ಮೈಸೂರು ತಲಾ 18, ಬಾಗಲಕೋಟೆ 17, ಉತ್ತರಕನ್ನಡ 14, ಹಾವೇರಿ 12, ಕೋಲಾರ 11, ಬೆಳಗಾವಿ 8, ಬೀದರ ಹಾಗೂ ಚಿತ್ರದುರ್ಗ 7, ರಾಯಚೂರು, ಮಂಡ್ಯ ಹಾಗೂ ದಾವಣಗೆರೆ ತಲಾ 6, ವಿಜಯಪುರ 5, ಶಿವಮೊಗ್ಗ 4, ಚಿಕ್ಕಬಳ್ಳಾಪುರ, ಕೊಪ್ಪಳ, ಚಿಕ್ಕಮಗಳೂರು ಹಾಗೂ ಕೊಡಗು ತಲಾ 3, ತುಮಕೂರು 2, ಯಾದಗಿರಿ ಜಿಲ್ಲೆಯಲ್ಲಿ 1 ಒಂದು ಹೀಗೆ ಒಟ್ಟು 28 ಜಿಲ್ಲೆಗಳಲ್ಲಿ ಕರೋನಾ ವೈರಸ್ ತನ್ನ ಅಟ್ಟಹಾಸ ಮೆರೆದಿದೆ  ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಾವಿನ ರಣಕೇಕೆ ರಾಜ್ಯದಲ್ಲಿ ಭಾನುವಾರವೂ ಮುಂದುವರೆದಿದ್ದು, ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ 4,  ದಕ್ಷಿಣ ಕನ್ನಡ 3, ತುಮಕೂರು ಹಾಗೂ ಬಾಗಲಕೋಟೆಯಲ್ಲಿ ತಲಾ 2,   ಮೈಸೂರು, ಹಾಸನ , ಬಳ್ಳಾರಿ ,  ಕಲಬರುಗಿ , ಧಾರವಾಡದಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ.     



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *