ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 50,848 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 50,848 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,00,28,709ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 68,817 ಜನ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 2,89,94,855 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 6,43,194 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ನಿನ್ನೆ ಒಂದೇ ದಿನ ದೇಶಾದ್ಯಂತ 1,358 ಸೋಂಕಿತರು ಮೃತಪಟ್ಟಿದ್ದು, ಸೋಂಕಿನಿಂದ ಅಸುನೀಗಿದವರ ಸಂಖ್ಯೆ 3,90,660 ಕ್ಕೆ ಏರಿಕೆಯಾಗಿದೆ.