ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದರೂ ಸಾವಿನ ಸಂಖ್ಯೆಯಲ್ಲಿ ಇಳಿಕೆ ಕಾಣುತ್ತಿಲ್ಲ.
ಕಳೆದ 24 ಗಂಟೆಯಲ್ಲಿ 2,08,921 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಸಾವಿನ ಸಂಖ್ಯೆ 4,157ಕ್ಕೆ ಏರಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,08,921 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,71,57,795 ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ನಿನ್ನೆ 2,95,955 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,43,50,816ಕ್ಕೆ ಏರಿಕೆಯಾಗಿದೆ.
ಸದ್ಯ ದೇಶದಲ್ಲಿ 24,95,591 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ದೇಶಾದ್ಯಂತ 4,157 ಮಂದಿ ಸೋಂಕಿತರು ಮೃತಪಟ್ಟಿದ್ದು, ಇದರೊಂದಿಗೆ ಕೊರೋನಾಗೆ ಬಲಿಯಾದವರ ಸಂಖ್ಯೆ 3,11,388ಕ್ಕೆ ಏರಿಕೆಯಾಗಿದೆ.