ರಾಜ್ಯ

ಖಾಸಗಿ ಆಸ್ಪತ್ರೆಗಳು ಕೋವಿಡ್ ಚಿಕಿತ್ಸೆಗೆ ಹಿಂಜರಿದರೆ ನಿರ್ದಾಕ್ಷಿಣ್ಯ ಕ್ರಮ




ಧಾರವಾಡ prajakiran.com :  ಜಗತ್ತನ್ನೇ ತಲ್ಲಣಗೊಳಿಸಿರುವ ಕೋವಿಡ್-೧೯ ನಿಯಂತ್ರಣಕ್ಕೆ ಸರ್ಕಾರಿ ಆಸ್ಪತ್ರೆಗಳೊಂದಿಗೆ ಖಾಸಗಿ ಆಸ್ಪತ್ರೆಗಳು ಕೂಡಾ ಕೈಜೋಡಿಸಬೇಕು.

ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆಯಡಿ ಜಿಲ್ಲಾಧಿಕಾರಿಗಳು ನಿರ್ದಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.




 ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ  ನಡೆದ ಆರೋಗ್ಯ ಕಾರ್ಯಪಡೆ ಸಭೆಯನ್ನುದ್ದೇಶಿಸಿ   ಮಾತನಾಡಿದರು.

 ಖಾಸಗಿ ಆಸ್ಪತ್ರೆಗಳು ಈ ಕಠಿಣ ಸಂದರ್ಭದಲ್ಲಿ ತಮ್ಮ ಜವಾಬ್ದಾರಿಯಿಂದ ಹಿಂದೆ ಸರಿಯಬಾರದು. ವಿಶ್ವ ಆರೋಗ್ಯ ಸಂಸ್ಥೆ ನೀಡಿರುವ ಸಲಹೆಗಳ ಪ್ರಕಾರ ಪ್ರತಿಯೊಬ್ಬ ನಾಗರಿಕರು ಕಡ್ಡಾಯವಾಗಿ ಮಾಸ್ಕ್ ಬಳಸಿ, ಸಾಮಾಜಿಕ ಅಂತರ ಕಾಪಾಡಿಕೊಂಡರೆ ಸೋಂಕು ತಡೆಯಬಹುದು.

 ವಿವಿಧ ಇಲಾಖೆಗಳ ಅಧಿಕಾರಿಗಳು ಸಾರ್ವಜನಿಕರು ಅನಗತ್ಯವಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಲು ವಾಟ್ಸ್ಪ್, ಫೋನ್ ಹಾಗೂ ಈ-ಮೇಲ್ ಮೂಲಕ ಜನಸ್ಪಂದನೆ ಮಾಡಬೇಕು ಎಂದರು.




ಮಾಸ್ಕ್ ಬಳಸದ ವ್ಯಕ್ತಿಗಳಿಂದ ೧೨ ಲಕ್ಷ ರೂ. ದಂಡ ಸಂಗ್ರಹಣೆ: ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಮಾಸ್ಕ್ ಬಳಕೆ ಮಾಡದಿರುವ ವ್ಯಕ್ತಿಗಳಿಂದ ಇದುವರೆಗೆ ಸುಮಾರು ೧೨ ಲಕ್ಷ ರೂ.ಗಳ ದಂಡ ಸಂಗ್ರಹಿಸಲಾಗಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯು ೩,೧೯,೦೦೦/- ರೂ., ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್  ಆಯುಕ್ತಾಲಯ ೬ ಲಕ್ಷ ರೂ., ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ವ್ಯಾಪ್ತಿಯಲ್ಲಿ ೩,೬೫,೦೦೦/- ರೂ. ದಂಡ ಸಂಗ್ರಹಿಸಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.




PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *