ರಾಜ್ಯ

ಬೆಳಗಾವಿಯ 9 ಜನರು ಗುಣಮುಖ : ಬಿಮ್ಸ್ ಆಸ್ಪತ್ರೆಯಿಂದ ಬಿಡುಗಡೆ

ಬೆಳಗಾವಿ prajakiran.com : ಕೋವಿಡ್-೧೯ ಸೋಂಕು ತಗುಲಿದ್ದ ಬೆಳಗಾವಿ ಜಿಲ್ಲೆಯ  9 ಜನರು ಸಂಪೂರ್ಣ ಗುಣಮುಖರಾಗಿದ್ದು, ಭಾನುವಾರಅವರನ್ನು ಜಿಲ್ಲೆಯ ನಿಯೋಜಿತ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಬಿಮ್ಸ್) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿ ಗ್ರಾಮದ  9 ಜನರು ಗುಣಮುಖರಾಗಿ ಬಿಡುಗಡೆ ಹೊಂದಿರುತ್ತಾರೆ ಎಂದು ಬಿಮ್ಸ್ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಬಿಡುಗಡೆ ಹೊಂದಿದವರ ವಿವರ:

ಪಿ-545, ಪಿ-700, ಪಿ- 713,ಪಿ-714, ಪಿ-715, ಪಿ-718, ಪಿ-720, ಪಿ-722, ಪಿ-719 ನೇ ಸೋಂಕಿತರೆಲ್ಲರೂ ಗುಣಮುಖರಾಗಿದ್ದಾರೆ.

ಇದರಲ್ಲಿ ಐವರು ಪುರುಷರು, ಮೂವರು ಮಹಿಳೆಯರು ಹಾಗೂ ಒಬ್ಬ ಬಾಲಕಿ ಇರುವುದು ಇಲ್ಲಿ ಗಮನಿಸಬಹುದು.

ಅಲ್ಲದೆ, ಬೆಳಗಾವಿ ಜಿಲ್ಲೆಯಲ್ಲಿ ಈವರೆಗೆ 127 ಕರೋನಾ ಸೋಂಕಿತರು ಪತ್ತೆಯಾಗಿದ್ದು, ಈವರೆಗೆ 65 ಜನ ಗುಣಮುಖರಾಗಿದ್ದಾರೆ.

ಸದ್ಯ 61 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಒಬ್ಬರು ಕರೋನಾಗೆ ಬಲಿಯಾಗಿರುವುದು ಇಲ್ಲಿ ಸ್ಮರಿಸಬಹುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *