ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 67,208 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 67,208 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದೆ.
ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 2,97,00,313ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 1,03,570 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,84,91,903 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 8,26,740 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ನಿನ್ನೆ ಒಂದೇ ದಿನ ದೇಶಾದ್ಯಂತ 2330 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,81,903ಕ್ಕೆ ಏರಿಕೆಯಾಗಿದೆ.