ನವದೆಹಲಿ prajakiran.com : ದೇಶದಲ್ಲಿ ನಿನ್ನೆ ಇಳಿಕೆಯಾಗಿದ್ದ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಮಂಗಳವಾರ ಮತ್ತೆ ಕೊಂಚ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ 92,596 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 92,596 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 2,90,89,069ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ನಿನ್ನೆ 1,62,664 ಸೋಂಕಿತರುಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಒಟ್ಟು ಗುಣಮುಖರಾದವರ ಸಂಖ್ಯೆ 2,75,04,126 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 12,31,415 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ದೇಶಾದ್ಯಂತ ನಿನ್ನೆ ಒಂದೇ ದಿನದಲ್ಲಿ 2219 ಮಂದಿ ಸೋಂಕಿತರು ಅಸುನೀಗಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,53,528ಕ್ಕೆ ಏರಿಕೆಯಾಗಿದೆ.