ಅಂತಾರಾಷ್ಟ್ರೀಯ

ದೇಶದಲ್ಲಿ ಇಳಿದ ಕೊರೋನಾ ಅಬ್ಬರ, ನಿನ್ನೆ ಸೋಂಕಿಗೆ ಬಲಿಯಾದವರ ಸಂಖ್ಯೆ 817

ನವದೆಹಲಿ Prajakiran.com : ದೇಶದಲ್ಲಿ ಕೊರೋನಾ ಸೋಂಕಿನ ಅಬ್ಬರ ತಗ್ಗಿದ್ದು, ಹೊಸ ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದೆ.

ಕಳೆದ 24 ಗಂಟೆಯಲ್ಲಿ 45,951 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದ್ದಯ, 817 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 45,951 ಹೊಸ ಸೋಂಕಿತರ ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆಯು 3,03,62,848ಕ್ಕೆ ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 60,729 ಕೊರೋನಾ ಸೋಂಕಿತರು ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 2,94,27,330ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 5,37,064 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ದೇಶಾದ್ಯಂತ ನಿನ್ನೆ ಒಂದೇ ದಿನ 817 ಸೋಂಕಿತರು ಅಸುನೀಗಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,98,454ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *