ಅಂತಾರಾಷ್ಟ್ರೀಯ

ಸೋಂಕಿತರ ಸಂಖ್ಯೆ ಕಡಿಮೆಯಾದರೂ ನಿಲ್ಲುತ್ತಿಲ್ಲ ಸಾವಿನ ಸಂಖ್ಯೆ : ದೇಶದಲ್ಲಿ ನಿನ್ನೆ 4,002 ಸಾವು

ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಎರಡನೇ ಅಲೆಯು ನಿಯಂತ್ರಣಕ್ಕೆ ಬಂದಿದ್ದು, ಸೋಂಕಿತರ ಸಂಖ್ಯೆಯಲ್ಲಿ ಗಣನೀಯ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 84,332 ಹೊಸ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 84,332 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,93,59,115 ಕ್ಕೆ ಏರಿಕೆಯಾಗಿದೆ.

ದೇಶದಲ್ಲಿ ನಿನ್ನೆ 1,21,311 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2,79,11,384 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 10,80,690 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ಮೂ ನಿನ್ನೆ ದೇಶಾದ್ಯಂತ 4,002 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,67,081 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *