ಅಂತಾರಾಷ್ಟ್ರೀಯ

ದೇಶದಲ್ಲಿ ಇದುವರೆಗೆ ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4 ಲಕ್ಷ

ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿನ ಸಂಖ್ಯೆ ಕಳೆದ 24 ಗಂಟೆಯಲ್ಲಿ 44,111 ಹೊಸ ಕೊರೋನಾ ಪ್ರಕರಣಗಳು ಕಂಡುಬಂದಿದ್ದು, 738 ಜನ ಸೋಂಕಿನಿಂದ ಮರಣಹೊಂದಿದ್ದಾರೆ.

ಇದರೊಂದಿಗೆ ದೇಶದಲ್ಲಿ ಬರೀ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ 4 ಲಕ್ಷ ದಾಟಿದೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 44,111 ಹೊಸ ಸೋಂಕಿತರು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 3,05,02,362ರಷ್ಟು ಏರಿಕೆಯಾಗಿದೆ.

ನಿನ್ನೆ ದೇಶದಲ್ಲಿ 57,477 ಜನ ಸೋಂಕಿನಿಂದ ಚೇತರಿಸಿಕೊಂಡಿದ್ದು, ಚೃತರಿಸಿಕೊಂಡವರ ಸಂಖ್ಯೆ 2,96,05,779ಕ್ಕೆ ಏರಿಕೆಯಾಗಿದೆ.

ಸದ್ಯ ದೇಶದಲ್ಲಿ 4,95,533 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನೂ ದೇಶಾದ್ಯಂತ ನಿನ್ನೆ 738 ಜನ ಸೋಂಕಿತರು ಅಸುನೀಗಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,01,050 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *