ರಾಜ್ಯ

ಧಾರವಾಡದ ಮಣಕಿಲ್ಲಾ ನಿವಾಸಿ ಸೇರಿ ಐವರು ಸಾವು…!

ಧಾರವಾಡ prajakiran.com : ಧಾರವಾಡ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವ್ ಹೊಂದಿದ್ದ ಐದು ಜನ  ಕಳೆದ ಮೂರು ದಿನಗಳ ಅವಧಿಯಲ್ಲಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಆ ಮೂಲಕ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 2842 ಕ್ಕೆ ಏರಿಕೆಯಾಗಿದ್ದು, ಈವರೆಗೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದವರಸಂಖ್ಯೆ  85 ಕ್ಕೆ ಏರಿದಂತಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಲ್ತ್ ಬುಲೇಟಿನ್ ತಿಳಿಸಿದೆ. 

ಇನ್ನೂ ಸ್ವಲ್ಪ ಸಮಾಧಾನದ ಸಂಗತಿಯೆಂದರೆ ಜಿಲ್ಲೆಯಲ್ಲಿ ಶುಕ್ರವಾರ  52 ಜನ ಬಿಡುಗಡೆಗೊಂಡಿದ್ದಾರೆ. ಆ ಮೂಲಕ ಈವರೆಗೆ 973 ಜನರು ಬಿಡುಗಡೆಗೊಂಡತಾಗಿದೆ. ಇನ್ನೂ 1784 ಸಕ್ರಿಯ ಕರೋನಾ ಸೋಂಕಿತರು ಜಿಲ್ಲೆಯಲ್ಲಿದ್ದಾರೆ  ಎಂದು ವಿವರಿಸಿದೆ.

ಸಾವನ್ನಪ್ಪಿದ್ದ ಸೋಂಕಿತರನ್ನು  ಹುಬ್ಬಳ್ಳಿಯ ಮಂಟೂರ ರಸ್ತೆ ನಿವಾಸಿ ಪಿ-30754 ( 65,ಪುರುಷ), ಧಾರವಾಡ ಮಣಕಿಲ್ಲಾ ನಿವಾಸಿ ಪಿ-31781 ( 51,ಮಹಿಳೆ),

 ಹುಬ್ಬಳ್ಳಿ ಬಂಕಾಪೂರ ಚೌಕ್ ನಿವಾಸಿ ಪಿ-47436  ( 46,ಮಹಿಳೆ)ಹುಬ್ಬಳ್ಳಿಯ  ಗೋಕುಲ ರಸ್ತೆ ನಿವಾಸಿ ಪಿ-48763 (63 ,ಮಹಿಳೆ), ಹಳೆಹುಬ್ಬಳ್ಳಿಯ ಸದರಸೊಪ್ಪ ನಿವಾಸಿ ಪಿ-64750 ( 83,ಮಹಿಳೆ)  ಎಂದು ಗುರುತಿಸಲಾಗಿದೆ.

ಇವರೆಲ್ಲರೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ನಿಯಮಾನುಸಾರ ಪಾರ್ಥಿವ ಶರೀರಗಳನ್ನು ಅಂತ್ಯಕ್ರಿಯೆ ಮಾಡಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *