ನವದೆಹಲಿ prajakiran.cim : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 54,069 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ದೇಶದಾದ್ಯಂತ 1,321 ಸೋಂಕಿತರು ಅಸುನೀಗಿದ್ದಾರೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 54,069 ಹೊಸ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,00,82,778 ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 68,885 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 2,90,63,740ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 6,27,057 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ನಿನ್ನೆ ಒಂದೇ ದಿನ ದೇಶಾದ್ಯಂತ 1,321 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ3,91,981 ಕ್ಕೆ ಏರಿಕೆಯಾಗಿದೆ.