ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡಿದ್ದು, ಕಳೆದ 24 ಗಂಟೆಯಲ್ಲಿ 1,32,364 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ ಕಳೆದ 24 ಗಂಟೆಯಲ್ಲಿ 1,32,364 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,85,74,350ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಗುರುವಾರ 2,07,071 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,65,97,655 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 16,35,993 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ದೇಶಾದ್ಯಂತ ನಿನ್ನೆ 2713 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,40,702 ಕ್ಕೆ ಏರಿಕೆಯಾಗಿದೆ.