ನವದೆಹಲಿ prajakiran.com : ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 62,480 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 62,480 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 2,97,62,793ಕ್ಕೆ ಏರಿಕೆಯಾಗಿದೆ.
ನಿನ್ನೆ ದೇಶದಲ್ಲಿ 88,977 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಚೇತರಿಸಿಕೊಂಡವರ ಸಂಖ್ಯೆ 2,85,80,647 ಕ್ಕೆ ಏರಿಕೆಯಾಗಿದೆ. ಪ್ರಸ್ತುತ ದೇಶದಲ್ಲಿ 7,98,656 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನಿನ್ನೆ ಒಂದೇ ದಿನ ದೇಶಾದ್ಯಂತ 1,587 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,85,80,647 ಕ್ಕೆ ಏರಿಕೆಯಾಗಿದೆ.