ನವದೆಹಲಿ prajakiran.com : ದಿನೇ ದಿನೇ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದೆ. ಶುಕ್ರವಾರ ಒಂದೇ ದಿನಕ್ಕೆ 2 ಲಕ್ಷಕ್ಕಿಂತಲೂ ಹೆಚ್ಚು ಹೊಸ ಪ್ರಕರಣಗಳು ಪತ್ತೆಯಾಗಿವೆ.
ಹೌದು ನಿನ್ನೆ ಒಂದೇ ದಿನದಲ್ಲಿ ದೇಶದಾದ್ಯಂತ 2,34,692 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 1,45,26,609ಕ್ಕೆ ಏರಿಕೆಯಾಗಿದೆ.
ಇನ್ನು ಒಂದೇ ದಿನಕ್ಕೆ 1,341 ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 1,75,649ಕ್ಕೆ ತಲುಪಿದೆ.
ಅದರೊಂದಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 16,79,740ಕ್ಕೆ ಏರಿಕೆಯಾಗಿದ್ದು, ಕಳೆದ 24 ಗಂಟೆಗಳಲ್ಲಿ 1,23,354 ಮಂದಿ ಗುಣಮುಖರಾದ್ದಾರೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.