ನವದೆಹಲಿ prajakiran.com : ದೇಶದಲ್ಲಿ ಎಲ್ಲೆಡೆಯೂ ಅನ್ಲಾಕ್ ಪ್ರಕ್ರಿಯೆ ಆರಂಭಗೊಂಡಿದೆ.
ಆದರೂ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ 37,566 ಹೊಸ ಕೊರೋನಾ ಪ್ರಕರಣಗಳು ದೃಢಪಟ್ಟಿದೆ.
ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 37,566 ಹೊಸ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆಯಲ್ಲಿ 3,03,16,897 ರಷ್ಟು ಏರಿಕೆಯಾಗಿದೆ.
ದೇಶದಲ್ಲಿ ನಿನ್ನೆ 56,994 ಕೊರೋನಾ ಸೋಂಕಿತರು ಚೇತರಿಸಿಕೊಂಡಿದ್ದು, ಚೇತರಿಸಿಕೊಂಡವರ ಸಂಖ್ಯೆ 2,93,66,601 ಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 5,52,659 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ ನಿನ್ನೆ ದೇಶಾದ್ಯಂತ 907 ಮಂದಿ ಸೋಂಕಿತರು ಅಸುನೀಗಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,97,637 ಕ್ಕೆ ಏರಿಕೆಯಾಗಿದೆ.