ಹುಬ್ಬಳ್ಳಿ prajakiran.com : ಬುಧವಾರ ನಡೆದ ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆಯ ಕೊನೆಯ ಒಂದು ತಾಸು ಮತದಾನ ಅವಧಿಯನ್ನು ಕೋವಿಡ್ ಸೋಂಕಿತರಿಗೆ ತಮ್ಮ ಹಕ್ಕು ಚಲಾಯಿಸಲು ಮೀಸಲಿಡಲಾಗಿತ್ತು.
ಅದರಂತೆ ಧಾರವಾಡ ಜಿಲ್ಲೆಯ
ಅಣ್ಣಿಗೇರಿ ಪುರಸಭೆಯ ಮತಗಟ್ಟೆ ಸಂಖ್ಯೆ 50 ರಲ್ಲಿ ಇಬ್ಬರು ಕೋವಿಡ್ ಸೋಂಕಿತರು ಪಿಪಿಇ ಕಿಟ್ ಧರಿಸಿ ಕೋವಿಡ್ ನಿಯಂತ್ರಣದ ಎಲ್ಲ ಮುಂಜಾಗ್ರತಾ ಕ್ರಮಗಳೊಂದಿಗೆ ಮತ ಚಲಾಯಿಸಿ ಗಮನ ಸೆಳೆದರು.
ಹೋಂ ಐಸೋಲೇಷನ್ ನಲ್ಲಿದ್ದ ಓರ್ವರು ಹಾಗೂ ಕೋವಿಡ್ ಕೇರ್ ಸೆಂಟರಿನಲ್ಲಿ ಇದ್ದ ಓರ್ವರು ಮತದಾನ ಮಾಡಿದ್ದು ವಿಶೇಷ ವಾಗಿತ್ತು.
ಇವರು ಮತಗಟ್ಟೆಗೆ ಬಂದು ಹೋಗಲು ಜಿಲ್ಲಾಡಳಿತದಿಂದ ಅಗತ್ಯವಾದ ವ್ಯವಸ್ಥೆ ಕಲ್ಪಿಸಲಾಗಿತ್ತು. ಮತದಾನದ ನಂತರ ಮತಗಟ್ಟೆಯನ್ನು ಪುನಃ ಸಂಪೂರ್ಣ ಸ್ಯಾನಿಟೈಸ್ ಮಾಡಲಾಯಿತು ಎಂದು ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿ ಡಾ.ಎಸ್. ಎಂ.ಹೊನಕೇರಿ ಹೇಳಿದ್ದಾರೆ.
ಅವರಿಬ್ಬರೂ ಕೋವಿಡ್ ನಿಯಮಾವಳಿ ಪ್ರಕಾರ ಮತ ಚಲಾಯಿಸದರೆ, ಮತಗಟ್ಟೆ ಸಿಬ್ಬಂದಿ ಕೂಡ ಪಿಪಿಇ ಕಿಟ್ ಧರಿಸಿ ಉತ್ಸುಕತೆಯಿಂದ ಅವರಿಗೆ ಸಹಕರಿಸಿದರು. ಇದರಿಂದ ಸೋಂಕಿತರು ಕೂಡ ಪುಳಕಿತಗೊಂಡರು.