ಭೋಪಾಲ್ prajakiran.com : ಬಿಎಂಎಚ್ಆರ್ಸಿ ಆಸ್ಪತ್ರೆಯಲ್ಲಿ ಕೊರೋನಾ ಸೋಂಕಿತೆ ಮೇಲೆ ಅತ್ಯಾಚಾರವಾಗಿ, ಮಹಿಳೆ ಮೃತಪಟ್ಟ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಆಸ್ಪತ್ರೆಯ ಪುರುಷ ನರ್ಸ್ 43 ವರ್ಷದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದು, ಮಹಿಳೆ ಮೃತಪಟ್ಟಿದ್ದಾರೆ.
ಈ ಪ್ರಕರಣ ಏ. 6 ರಂದು ನಡೆದಿದ್ದು, ಇದೀಗ ಬೆಳಕಿಗೆ ಬಂದಿದೆ.
ಆಸ್ಪತ್ರೆ ವಿಷಯವನ್ನು ಮುಚ್ಚಿ ಹಾಕಲು ಯತ್ನಿಸಿದ್ದು, ಇದೀಗ ಸಾಮಾಜಿಕ ಜಾಲತಾಣಗಳ ಮೂಲಕ ವಿಷಯ ಹೊರಗೆ ಬಂದಿದೆ.
ನಂತರ ಆರೋಪಿ ಸಂತೋಷ್ ಅಹಿರ್ವಾರ್ನನ್ನು ಪೊಲೀಸರು ಬಂಧಿಸಿದ್ದಾರೆ.