ರಾಜ್ಯ

ಹಾಸನದಲ್ಲಿ ಕೋವಿಡ್ 19ನಿಂದ 29 ಮಂದಿ ಗುಣಮುಖ

ಹಾಸನ‌ prajakiran.com  : ಹಾಸನದಲ್ಲಿ ಕೋವಿಡ್ 19 ಪ್ರಕರಣಗಳು  ಹೆಚ್ಚುತ್ತಿರುವ ಬೆನ್ನಲ್ಲೇ ಗುರುವಾರ  29 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಆಶಾದಾಯಕ ಬೆಳವಣಿಗೆಯಾಗಿದೆ.

ಹೊಳೆನರಸೀಪುರ ತಾಲ್ಲೂಕಿನ 6 ಹಾಗೂ ಚನ್ನರಾಯಪಟ್ಟಣ ತಾಲ್ಲೂಕಿನ 23 ಮಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದರು.

ಬಿಡುಗಡೆ ಹೊಂದಿದ ಎಲ್ಲರೂ ಆಸ್ಪತ್ರೆಯಲ್ಲಿ ತಮಗೆ ದೊರೆತ ಚಿಕಿತ್ಸೆ ಹಾಗೂ ಸೌಲಭ್ಯ ಗಳ ಬಗ್ಗೆ ತೃಪ್ತಿ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದರು.

ಈ‌ ಸಂದರ್ಭದಲ್ಲಿ ಶ್ರವಣಬೆಳಗೊಳ ಕ್ಷೇತ್ರದ ಶಾಸಕರಾದ  ಸಿ.ಎನ್ ಬಾಲಕೃಷ್ಣ,ಜಿಲ್ಲಾಧಿಕಾರಿ ಆರ್ .ಗಿರೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಬಿ.ಎ ಪರಮೇಶ್ ,ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ,ಅಪರ ಪೋಲೀಸ್ ವರಿಷ್ಠಾಧಿಕಾರಿ ನಂದಿನಿ , ಹಿಮ್ಸ್ ಅಸ್ಪತ್ರೆ ನಿರ್ದೇಶಕರಾದ ಡಾ ರವಿ ಕುಮಾರ್ ,ಜಿಲ್ಲಾ ಶಸ್ತ್ರ ಚಿಕಿತ್ಸಕರಾದ  ಡಾ ಕೃಷ್ಣಮೂರ್ತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ ಸತೀಶ್ ಹಾಜರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *