ರಾಜ್ಯ

ಕೋವಿಡ್ ನಿಯಮ ಉಲ್ಲಂಘಿಸಿ ಬಸವೇಶ್ವರ ಜಾತ್ರೆ ; ಧಾರವಾಡದ ಕೂಬಿಹಾಳದ 18 ಜನರ ವಿರುದ್ಧ ಪ್ರಕರಣ ದಾಖಲು

ಧಾರವಾಡ prajakiran. com :ಕೊರೊನಾ ನಿಯಮ ಉಲ್ಲಂಘಿಸಿ, ಕುಂದಗೋಳ ತಾಲೂಕಿನ ಕೂಬಿಹಾಳ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಆಚರಿಸಿದ ಆರೋಪದ ಮೇರೆಗೆ 18 ಜನರ ಮೇಲೆ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಇಂದು (ಏ.17)ಪ್ರಕರಣ ದಾಖಲಾಗಿದೆ.

ರಾಮಪ್ಪ ಸಂಶಿ, ಸಿದ್ದಪ್ಪ ರಡ್ಡೇರ, ಹನಮಂತಪ್ಪ ವಡಕಣ್ಣವರ, ಮಂಜುನಾಥ ಪೂಜಾರ, ಯಲ್ಲಪ್ಪ ಹೆಬಸೂರ, ಚಂದ್ರಶೇಖರ ಪಾಲಕರ್, ಬಸಪ್ಪ ಹೊರಗಿನಮನಿ, ಬಸವರಾಜ ದೇಶಪಾಂಡೆ, ಯಲ್ಲಪ್ಪ ಬಿಳೆಬಲ್, ನಿಂಗಪ್ಪ ಬಾಚಣಕಿ, ಬಾಬುಖಾನ್ ನೂರಾಲಿಖಾನವರ, ಚೆನ್ನಬಸಪ್ಪ ರಡ್ಡೇರ, ಸುರೇಶಗೌಡ ಪಾಟೀಲ, ವೀರಪಾಕ್ಷಯ್ಯ ಕುಮಾರಗೊಪ್ಪ, ಬಸನಗೌಡ ಶಿರಕೋಳ, ಶಿವಪ್ಪ ತಳವಾರ, ಜಗದೀಶ ಬಾಗಲ, ಬಸಪ್ಪ ಕುಂಬಾರ ಮೇಲೆ ಪ್ರಕರಣ ದಾಖಲಿಸಲಾಗಿದೆ.

ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಏ.3 ರಿಂದ ಜಿಲ್ಲೆಯಾದ್ಯಂತ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಚರಿಸಬಾರದು ಎಂದು ಜಿಲ್ಲಾಧಿಕಾರಿಗಳು ನಿಷೇದಾಜ್ಞೆ ಜಾರಿ ಮಾಡಿ ಆದೇಶ ಹೊರಡಿಸಿದ್ದರು.

ಏ. 13 ರಂದು ಈ ನಿಯಮ ಉಲ್ಲಂಘಿಸಿ, ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಕುಬಿಹಾಳ ಗ್ರಾಮದಲ್ಲಿ ಬಸವೇಶ್ವರ ಜಾತ್ರೆ ಆಚರಿಸಲಾಗಿದೆ ಎಂದು ಕೂಬಿಹಾಳ ಗ್ರಾಮ ಪಂಚಾಯತ ಅಭಿವೃದ್ಧಿ ಅಧಿಕಾರಿ ಬಸವರಾಜ ಬಾಗಲ ಪ್ರಕರಣ ಕುರಿತು ದೂರು ದಾಖಲಿಸಿದ್ದಾರೆ. ಕುಂದಗೋಳ ಪೊಲೀಸರು ಪ್ರಕರಣದ ತನಿಖೆ ನಡೆಸುತ್ತಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *