ಅಂತಾರಾಷ್ಟ್ರೀಯ

ದೆಹಲಿಯಲ್ಲಿ ಒಂದೇ ದಿನ 347 ಮಂದಿ ಕೊರೋನಾಗೆ ಬಲಿ

ನವದೆಹಲಿ Prajakiran.com : ದೇಶದಲ್ಲಿ ಕೊರೋನಾ ಎರಡನೇ ಅಲೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿನಿಂದ ಸಾವಿಗಿಡಾಗುತ್ತಿರುವವರ ಸಂಖ್ಯೆ ಹೆಚ್ಚುತ್ತಲೇ ಇದೆ.

ರಾಷ್ಟ್ರದ ರಾಜಧಾನಿ ನವದೆಹಲಿಯಲ್ಲಿಯೇ ಕೋವಿಡ್ ಸೋಂಕಿನಿಂದ ಕಳೆದ 24 ಗಂಟೆಗಳಲ್ಲಿ 347 ಮಂದಿ ಸಾವನ್ನಪ್ಪಿದ್ದಾರೆ.

ಅಲ್ಲದೆ 24,103 ಜನರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ

ದೆಹಲಿಯಲ್ಲಿ ಈಗಾಗಲೇ ಲಕ್‌ಡೌನ್ ಘೋಷಣೆ ಮಾಡಿ ಒಂದು ವಾರವಾದರೂ ಕೋವಿಡ್ ಸೋಂಕು ಆತಂಕಕ್ಕೆ ಕಾರಣವಾಗಿದೆ.

ಕಳೆದ 24 ಗಂಟೆ, ಶನಿವಾರ ಸಂಜೆ ಕೊನೆಯಾಗುವವರೆಗೆ 74,702 ಮಂದಿಯನ್ನು ಪರೀಕ್ಷೆ ಮಾಡಲಾಗಿದ್ದು, ಅವರಲ್ಲಿ ಶೇ 32.27ರಷ್ಟು ಜನರಿಗೆ ಕೊವಿಡ್ ಸೋಂಕು ದೃಢಪಟ್ಡಿದೆ.

ಪ್ರಸ್ತುತ ದೆಹಲಿಯಲ್ಲಿ 93,080 ಸಕ್ರಿಯ ಪ್ರಕರಣಗಳಿವೆ. ಕಳೆದ ಮಾರ್ಚ್‌ನಿಂದ ಇದುವರೆಗೆ ಸೋಂಕಿಗೆ ಒಳಗಾದವರ ಸಂಖ್ಯೆ 10 ಲಕ್ಷದ ಗಡಿ ದಾಟಿದ್ದು, ಶನಿವಾರ 10,04,782 ತಲುಪಿದೆ. ಇದುವರೆಗೆ ಒಟ್ಟು 13,898 ಜನ ಸಾವಿಗೀಡಾಗಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *