ರಾಜ್ಯ

ರಾಜ್ಯ ಮಟ್ಟದ ಪ್ರಾಯೋಗಿಕ ಗೋ ಮಾತಾ ಸಹಕಾರ ಸಂಘ ಸ್ಥಾಪಿಸಲು ಮುಖ್ಯಮಂತ್ರಿ ಸೂಚನೆ

ಬೆಂಗಳೂರು prajakiran.com , ಮೇ 6 :

ರಾಜ್ಯ ಮಟ್ಟದಲ್ಲಿ ಪ್ರಾಯೋಗಿಕವಾಗಿ ಗೋ ಮಾತಾ ಸಹಕಾರ ಸಂಘ ಸ್ಥಾಪಿಸಿ ಗೋ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ರೂಪುರೇಷೆಗಳನ್ನು ಸಿದ್ದಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

2022-23 ನೇ ಸಾಲಿನ ಆಯವ್ಯಯ ಘೋಷಣೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಪಶುಸಂಗೋಪನಾ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಸಭೆಯ ಮುಖ್ಯಾಂಶಗಳು:

1.ಗ್ರಾಮೀಣ ಪ್ರದೇಶಗಳ ಪಶುಚಿಕಿತ್ಸಾಲಯಗಳನ್ನು ಹೊಸ ಮಾದರಿಯಲ್ಲಿ ಮಾಡಬೇಕು. ಸಿಬ್ಬಂದಿ ನೇಮಕಾತಿಗಾಗಿ ಡಿಪ್ಲೊಮಾ ವಿದ್ಯಾರ್ಥಿಗಳನ್ನು ಇದಕ್ಕಾಗಿ ನೇಮಿಸುವುದು. 50 ಪಶುಚಿಕಿತ್ಸಾಲಯಗಳನ್ನು ಬಾಡಿಗೆ ಆಧಾರದ ಮೇಲೆ ಪ್ರಾರಂಭಿಸಲು ಅನುಮತಿ ನೀಡುವುದು.

2. ಜೆ.ಒ.ಸಿ ಮತ್ತು ಡಿಪ್ಲೊಮಾ ಮಾಡಿರುವ ಅಭ್ಯರ್ಥಿಗಳನ್ನು ನೇಮಿಸಿಕೊಳ್ಳುವುದು.

3. ಹಾವೇರಿ ಜಿಲ್ಲೆಯಲ್ಲಿ ಒಂದು ಲಕ್ಷ ಲೀಟರ್ ಸಾಮರ್ಥ್ಯದ ಮೆಗಾ ಡೈರಿಯಡಿ ಯುಹೆಚ್ ಟಿ ಘಟಕಕ್ಕೆ ಅಗತ್ಯವಿರುವ 20 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು. ಅದಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವುದು.

4. ಗೋಶಾಲೆಗಳ ಸಂಖ್ಯೆಯನ್ನು 31 ರಿಂದ 100 ಕ್ಕೆ ಹೆಚ್ಚಿಸುವ ಸಂಬಂಧ 70 ಹೊಸ ಗೋಶಾಲೆಗಳನ್ನು ಸ್ಥಾಪಿಸಲು ನಿವೇಶನಗಳನ್ನು ಗೊತ್ತು ಮಾಡುವುದು

5. ಪುಣ್ಯಕೋಟಿ ದತ್ತು ಯೋಜನೆಯ ಪೋರ್ಟಲ್ ನ್ನು ಜೂನ್ ಮಾಹೆಯ ಅಂತ್ಯದಲ್ಲಿ ಪ್ರಾರಂಭಿಸುವುದು. ಯಾವ ಗೋಶಾಲೆಯಲ್ಲಿ ಯಾವ ಗೋವುಗಳನ್ನು ದತ್ತು ಪಡೆಯಲಾಗಿದೆ ಎನ್ನುವುದನ್ನು ಪೋರ್ಟಲ್ ನಲ್ಲಿ ಬಿಂಬಿಸುವುದು

6. ಗೋ ತಳಿಗಳನ್ನು ಸಂರಕ್ಷಿಸಲು ಮತ್ತು ಅವುಗಳ ಸಂತತಿಯನ್ನು ಹೆಚ್ಚಿಸಲು ಕೆಎಂಎಫ್ ಮೂಲಕ 2000 ಗೋ ತಳಿಗಳನ್ನು ರೈತರಿಗೆ ಹಂಚಿಕೆ ಮಾಡುವುದು. ಈ ವರ್ಷ ಇದಕ್ಕಾಗಿ 4 ಕೋಟಿ ಅನುದಾನ ಒದಗಿಸುವುದು.

7. ಶಿವಮೊಗ್ಗದ ಪಶುವೈದ್ಯಕೀಯ ಕಾಲೇಜಿನಲ್ಲಿ ಗೋ ಉತ್ಪನ್ನಗಳ ತಾಂತ್ರಿಕತೆ ಮತ್ತು ಪ್ರಾಮಾಣೀಕರಣದ ಅಭಿವೃದ್ಧಿಗಾಗಿ ಸಂಶೋಧನಾ ಕೋಶವನ್ನು ಸ್ಥಾಪನೆಗೆ ಕ್ರಮ ವಹಿಸುವುದು.

8.ಕುರಿಗಾಹಿಗಳಿಗೆ ವಸತಿ ಸೌಕರ್ಯದ ಜೊತೆಗೆ ಕುರಿ ದೊಡ್ಡಿ ನಿರ್ಮಿಸಲು ಐದು ಲಕ್ಷ ಸಹಾಯಧನ. ರಾಜೀವ್ ಗಾಂಧಿ ವಸತಿ ನಿಗಮಕ್ಕೆ ಈ ಕಾರ್ಯಕ್ರಮವನ್ನು ವಹಿಸಿ, ನಿವೇಶನವಿದ್ದವರಿಗೆ ಮನೆ ನಿರ್ಮಿಸಿಕೊಡುವುದು. ನರೇಗಾ ಮತ್ತು ರಾಜೀವ್ ಗಾಂಧಿ ವಸತಿ ನಿಗಮ ಸೇರಿಸಿ 5000 ಗುರಿ ನಿಗದಿಪಡಿಸಿಕೊಳ್ಳುವುದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *