ಅಪರಾಧ

ಧಾರವಾಡದ ಮಾಳಾಪುರದಲ್ಲಿ ಮತ್ತಿಬ್ಬರು ಕ್ರಿಕೆಟ್ ಬುಕ್ಕಿಗಳ ಬಂಧನ

ಧಾರವಾಡ prajakiran.com : ಹುಬ್ಬಳ್ಳಿ-ಧಾರವಾಡದ ಪೊಲೀಸರ ಬೇಟೆಯ ಮಧ್ಯೆಯೂ ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್ ದಂಧೆ ಮತ್ತೆ ಮುಂದುವರೆದಿದೆ.

ಈ ಹಿನ್ನಲೆಯಲ್ಲಿ ಅವಳಿನಗರ ಪೊಲೀಸ್ ಕಾರ್ಯಾಚರಣೆ ಕೂಡ ಚುರುಕು ಮುಂದುವರೆದಿದೆ.

ಕ್ರಿಕೆಟ್ ಬೆಟ್ಟಿಂಗ್ ಆಡುತ್ತಿದ್ದ ಮತ್ತಿಬ್ಬರನ್ನು ಧಾರವಾಡದ ಉಪನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಮಾಳಾಪುರದ ರಿಯಾಜ್‌ಖಾನ್ ಅಲಿಯಾಸ್ ಟೆನ್ಸನ್ ರಿಯಾಜ್
ಹಾಗೂ ಮೆಹಬೂಬ್ ನಗರದ ಅಲ್ಲಾಭಕ್ಷ ಎಂದು ಗುರುತಿಸಲಾಗಿದೆ.

ಇವರಿಬ್ಬರು ಆರೋಪಿಗಳು
ದುಬೈನಲ್ಲಿ ನಡೆಯುತ್ತಿರುವ ಐಪಿಎಲ್ ಕ್ರಿಕೆಟ್ ಮ್ಯಾಚ್ ಗೆ ಸಂಬಂಧಿಸಿದಂತೆ ಇವರು ಬೆಟ್ಟಿಂಗ್ ಆಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು
ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಪನಗರ ಠಾಣೆ ಪೊಲೀಸರು ಈ ಇಬ್ಬರನ್ನೂ ಬಂಧಿಸಿ ಅವರಿಂದ 25000 ನಗದು ಹಾಗೂ ಒಂದು ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಧಾರವಾಡದ ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *