ಮುಂಬೈ Prajakiran.com : ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ವಿರುದ್ಧ ಅಕ್ರಮ ಹಣ ವರ್ಗಾವಣೆ ಪ್ರಕರಣದಡಿ ಇಂದು ಜಾರಿ ನಿರ್ದೇಶನಾಲಯ ಕ್ರಿಮಿನಲ್ ಪ್ರಕರಣ ದಾಖಲಿಸಿದೆ.
ದೇಶಮುಖ್ ವಿರುದ್ಧ ಇತ್ತೀಚೆಗೆ ದಾಖಲಾದ ಸಿಬಿಐ ಎಫ್ಐಆರ್ ಅಧ್ಯಯನ ಮಾಡಿದ ನಂತರ ಮನಿ ಲಾಂಡರಿಂಗ್ ತಡೆ ಕಾಯ್ದೆ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ವಿಚಾರಣೆಗೆ ಹಾಜರಾಗುವಂತೆ ದೇಶಮುಖ್ ಅವರಿಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಬಹುದು.
ಇತ್ತೀಚಿಗಷ್ಟೆ ಭ್ರಷ್ಟಾಚಾರ ಆರೋಪ ಸಂಬಂಧ ದೇಶಮುಖ್ ವಿರುದ್ಧ ಸಿಬಿಐ ಪ್ರಕರಣ ದಾಖಲಿಸಿದೆ.
ಹಾಗೂ ಅವರ ಮನೆ ಮೇಲೆ ದಾಳಿ ನಡೆಸಿ ವಿವಿಧ ದಾಖಲೆಗಳಿಗಾಗಿ ಶೋಧ ನಡೆಸಿತ್ತು.