ರಾಜ್ಯ

ತೊಗರಿ ಬೆಳೆ ನಷ್ಟ : ಹೆಕ್ಟೇರ್ ಗೆ 10 ಸಾವಿರ ಪರಿಹಾರ

ಬೆಂಗಳೂರು ಪ್ರಜಾಕಿರಣ.ಕಾಮ್ ಜ. 24 : 
ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರ್ ಗೆ 10,000 ರೂ. ಗಳಂತೆ ಎನ್.ಡಿ.ಆರ್.ಎಫ್./ ಎಸ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಟ 2 ಹೆಕ್ಟೇರ್ಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಪರಿಹಾರ ಘೋಷಿಸಿದೆ.

ಒಟ್ಟು ಪರಿಹಾರ ಮೊತ್ತವು ರೂ. 223 ಕೋಟಿಯೆಂದು ಅಂದಾಜಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ಜಿಲ್ಲಾ ಪ್ರವಾಸದಿಂದ ಹಿಂತಿರುಗಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ತೀರ್ಮಾನ ಕೈಗೊಳ್ಳಲಾಯಿತು.

ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ತದನಂತರ ನವೆಂಬರ್ ತಿಂಗಳಿನಲ್ಲಿ ತಲೆದೋರಿದ ಒಣ/ ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಮೇಲಿನ ಮೂರು ಜಿಲ್ಲೆಗಳಲ್ಲಿ ಉಲ್ಬಣ ಗೊಂಡು ಬೆಳೆಹಾನಿಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ ಜಿಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಒಟ್ಟಾರೆಯಾಗಿ 2.2278 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ತೊಗರಿ ಬೆಳೆ ಸಂಕೀರ್ಣ ನೆಟೆ ರೋಗಕ್ಕೆ ಹಾನಿಯಾಗಿರುವುದು ವರದಿಯಾಗಿರುತ್ತದೆ.

ಹಾನಿಗೊಳಗಾದ ರೈತರ ನೆರೆವಿಗೆ ಧಾವಿಸಿದ ಸರ್ಕಾರವು “ವಿಶೇಷ ಪ್ರಕರಣ”ವೆಂದು ರಾಜ್ಯ ಸರ್ಕಾರ ತೀರ್ಮಾನಿಸಿ ಪರಿಹಾರ ಘೋಷಿಸಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *