ಜಿಲ್ಲೆ

ಧಾರವಾಡ ಜಿಲ್ಲಿಯಲ್ಲಿ 89 ಸಾವಿರ ಹೆಕ್ಟೇರ್ ಕೃಷಿ ಬೆಳೆ ಹಾನಿ : ಸಮರ್ಪಕ ಜಂಟಿ ಸಮೀಕ್ಷೆ ಮೂಲಕ‌ ನಿಖರ ಹಾನಿ ದಾಖಲಿಸಲು ಸಚಿವ ಬಿ.ಸಿ.ಪಾಟೀಲ ಸೂಚನೆ

ಧಾರವಾಡ prajakiran.com ಆ.08:

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ಸುಮಾರು 89,148 ಹೆಕ್ಟೇರ್ ಪ್ರದೇಶದ ಕೃಷಿಬೆಳೆಗಳು ಹಾನಿಯಾಗಿವೆ‌‌.ಹೆಸರು,ಉದ್ದು ಕೊಯ್ಲು ಮಾಡಲು ಸಾಧ್ಯವಾಗದೇ ರೈತರು ತೀವ್ರ ಸಂಕಷ್ಟದಲ್ಲಿದ್ದಾರೆ.

ಜಂಟಿ ಸಮೀಕ್ಷೆ ಸಮರ್ಪಕವಾಗಿ ಕೈಗೊಂಡು ಹಾನಿಯ ನಿಖರ ಮಾಹಿತಿ ದಾಖಲಿಸಬೇಕು‌.ಬೆಳೆವಿಮಾ ಕಂಪೆನಿಗಳ ಪ್ರತಿನಿಧಿಗಳು ಸ್ಥಳೀಯವಾಗಿ ಲಭ್ಯ ಇರಬೇಕು.

ಕೃಷಿ,ತೋಟಗಾರಿಕೆ,ಪಶುಸಂಗೋಪನೆ ಅಧಿಕಾರಿಗಳು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ರೈತರಿಗೆ ಸ್ಪಂದಿಸಬೇಕು ಎಂದು ಕೃಷಿಸಚಿವ ಬಿ.ಸಿ‌.ಪಾಟೀಲ ಹೇಳಿದರು.

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪ್ರವಾಹ ಪರಿಸ್ಥಿತಿ ಮತ್ತು ಬೆಳೆಹಾನಿ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು,

ಬೆಳೆವಿಮಾ ಕಂಪೆನಿಗಳ ಪ್ರತಿನಿಧಿಗಳು ಸ್ಥಳೀಯ ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಲಭ್ಯ ಇರಬೇಕು.

ಎಸ್‌ಡಿಆರ್‌ಎಫ್,ಎನ್‌ಡಿಆರ್ ಎಫ್ ಮಾರ್ಗಸೂಚಿಗಳನ್ವಯ ಪರಿಹಾರಕ್ಕೆ ಜಂಟಿ ಸಮೀಕ್ಷೆ ಸಮರ್ಪಕವಾಗಿ ನಡೆಯಬೇಕು.ಈ ವರ್ಷ ಅಧಿಕ ಮಳೆಯಿಂದ ತುರ್ತು ಪರಿಸ್ಥಿತಿಯ ಸನ್ನಿವೇಶ ಸೃಷ್ಟಿಯಾಗಿದೆ.

ಅಧಿಕಾರಿಗಳು ಸಮರೋಪಾದಿಯಲ್ಲಿ ಕರ್ತವ್ಯ ನಿರ್ವಹಿಸಿ,ರೈತರಿಗೆ ಸಕಾಲದಲ್ಲಿ ಸ್ಪಂದಿಸಬೇಕು.ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್,ಕರ್ನಾಟಕ ರೈತ ಸುರಕ್ಷಾ ಫಸಲ್ ವಿಮಾ ಯೋಜನೆಯಡಿ ನೋಂದಾಯಿಸಿಕೊಂಡಿರುವ ರೈತರು ಇ-ಕೆವೈಸಿ ಮಾಡಿಕೊಳ್ಳಬೇಕು.

ರಾಜ್ಯದಲ್ಲಿಯೇ ಧಾರವಾಡ ಜಿಲ್ಲೆಯಲ್ಲಿ ಅತಿಹೆಚ್ಚು ಅಂದರೆ 30 ಸಾವಿರ ಲೀಟರ್ ನ್ಯಾನೋ ಯೂರಿಯಾ ಬಳಸಿದ್ದಾರೆ.

ಜಾಗತಿಕ ತಾಪಮಾನ ನಿಯಂತ್ರಣ ಹಾಗೂ ಭೂಮಿಯ ಫಲವತ್ತತೆ ಹೆಚ್ಚಳಕ್ಕೆ ಇದು ಪೂರಕವಾಗಿದೆ.ಈ ನಿಟ್ಟಿನಲ್ಲಿ ಜಿಲ್ಲೆಯ ಕೃಷಿ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಯ ಕಾರ್ಯ ಪ್ರಶಂಸನೀಯ ಎಂದರು.

ಜಂಟಿ ಕೃಷಿ ನಿರ್ದೇಶಕ ರಾಜಶೇಖರ ಐ.ಬಿ.ಮಾತನಾಡಿ,ಜೂನ್ ಹಾಗೂ ಜುಲೈ ತಿಂಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ.

ಜಿಲ್ಲೆಯಲ್ಲಿ ಸುಮಾರು 89 ಸಾವಿರ ಹೆಕ್ಟೇರ್‌ಗೂ ಅಧಿಕ ಕೃಷಿ ಬೆಳೆ ಹಾನಿಯಾಗಿದೆ. ಇದರಲ್ಲಿ ಹೆಸರು ಬೆಳೆ ಹಾನಿಯ ಪ್ರಮಾಣವೇ 61 ಸಾವಿರ ಹೆಕ್ಟೇರಿನಷ್ಟಿದೆ.ಹೆಚ್ಚಿನ ಮಳೆಯಿಂದ ಹೆಸರು ಮತ್ತು ಉದ್ದು ಬೆಳೆಯ ಕೋಯ್ಲು ಕಷ್ಟಸಾಧ್ಯವಾಗಿದೆ.

ಅಧಿಕ ತೇವಾಂಶದಿಂದ ಶೇಂಗಾ ಕೊಳೆಯುವ ಹಂತದಲ್ಲಿದೆ.ಹತ್ತಿ,ಮೆಕ್ಕೆಜೋಳ ಬೆಳೆಗಳ ಬೆಳವಣಿಗೆ ಕುಂಠಿತವಾಗಿದೆ.1,48,166 ರೈತರು ಬೆಳೆವಿಮೆ ಯೋಜನೆಯಡಿ ನೋಂದಾಯಿಸಿಕೊಂಡಿದ್ದಾರೆ.ಜಿಲ್ಲೆಯಲ್ಲಿ ಬೀಜ,ರಸಗೊಬ್ಬರ ಪೂರೈಕೆ ಸಮರ್ಪಕವಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು.

ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ,ಉಪವಿಭಾಗಾಧಿಕಾರಿ ಅಶೋಕ ತೇಲಿ ಮತ್ತಿತರರ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *