ಕಲಬುರಗಿ Prajakiran.com : ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ನಡೆಸುತ್ತಿರುವ ಸಿಟಿ ಸ್ಕ್ಯಾನ್ನಿಂಗ್ ಗೆ ದರ ನಿಗದಿ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿ, ಕೊರೋನಾ ಪತ್ತೆಮಾಡಲು ತಜ್ಞರು ಸಿಟಿ ಸ್ಕ್ಯಾನ್ ನಡೆಸಲು ಸಲಹೆ ನೀಡಿದ್ದಾರೆ.
ಇದರಿಂದ ಖಾಸಗಿ ಆಸ್ಪತ್ರೆಗಳು ಜನರಿಂದ ಹೆಚ್ಚು ಹಣ ಪಡೆಯುತ್ತಿದ್ದಾರೆ. ಹಾಗಾಗಿ ಎಲ್ಲಾ ಖಾಸಗಿ ಆಸ್ಪತ್ರೆಗಳಿಗೂ ಸಿಟಿ ಸ್ಕ್ಯಾನಿಂಗ್ ಗೆ ದರ ನಿಗದಿ ಮಾಡಲಾಗುವುದು.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಸ್ಕ್ಯಾನಿಂಗ್ ನಡೆಸಲಾಗುತ್ತಿದೆ ಎಂದರು.
ಇದೇ ವೇಳೆ ಸಾರ್ವತ್ರಿಕ ಲಸಿಕೆ ಯಾವಾಗಿನಿಂದ ಆರಂಭವಾಗಲಿದೆ ಎಂಬುದು ಕಂಪನಿಗಳ ಉತ್ಪಾದನೆ ನೋಡಿಕೊಂಡು ತಿಳಿಸಲಾಗುತ್ತದೆ ಎಂದರು.