ಕ್ರೀಡೆ

ಖೇಲೋ ಇಂಡಿಯಾ ಟೀಮ್‌ಗೆ ಆಯ್ಕೆಯಾದ ಕೂಲಿ ಕಾರ್ಮಿಕನ ಮಗಳು ಪವಿತ್ರಾ ಕುರ್ತಕೋಟಿ ಸಾಧನೆಯ ಹಾದಿ

ಗದಗ prajakiran.com :  ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಶ್ರೀ ಅಶೋಕ್‌ ಮತ್ತು ಶ್ರೀಮತಿ ರೇಣುಕಾ ದಂಪತಿ ಮಗಳಾದ ಕು. ಪವಿತ್ರಾ ಕುರ್ತಕೋಟಿ ಇವರು, 5 ನೇ ತರಗತಿಗೆ ಸೈಕ್ಲಿಂಗ್‌ ಕ್ರೀಡೆಯಲ್ಲಿ ಪ್ರವೇಶ ಪಡೆದು ಪ್ರಥಮ ಪಿಯುಸಿ ಗೆ ವಿಡಿಎಫ್‌ಟಿ ಬಾಲಕಿಯರಕಾಲೇಜಿನಲ್ಲಿ ಓದುತ್ತಿದ್ದಾರೆ.

ತಂದೆ ರೈತ ಕಾರ್ಮಿಕರಾಗಿದ್ದು, ತಾಯಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿ ಊಟದ ಅಡುಗೆ ಸಹಾಯಕರಾಗಿದ್ದಾರೆ.

ಅತ್ಯಂತ ಬಡತನದಲ್ಲಿ ಜೀವನ ಸಾಗಿಸುತ್ತಿದ್ದಾರೆ. ಕು. ಪವಿತ್ರ ಅವರಿಗೆ ಮೊದಲಿನಿಂದಲೂ ಸೈಕ್ತಿಂಗ್‌ನಲ್ಲಿ ಆಸಕ್ತಿ.

ಆದರೆ ಗುಣಮಟ್ಟದ ಸೈಕಲ್‌ ಖರೀದಿಸುವ ಶಕ್ತಿ ಇಲ್ಲ. ದಾನಿಗಳ ಸಹಾಯದಿಂದ ಕು. ಪವಿತ್ರ ಅವರು ಸೈಕಲ್‌ ಖರೀದಿಸಿ ವಿವಿಧ ಸ್ಪರ್ಧೆಯಲ್ಲಿ ಪಾಲ್ಗೊಂಡು ಬಹುಮಾನ ಗಳಿಸಿದ್ದಾರೆ.

ಮುಖ್ಯಮಂತ್ರಿಗಳು ಖಾಸಗಿ ಸುದ್ದಿವಾಹಿನಿಯಲ್ಲಿ ಸ೦ದರ್ಶನದಲ್ಲಿದ್ದಾಗ ಕು. ಪವಿತ್ರ ಅವರು ದೂರವಾಣಿಯಲ್ಲಿ ಮಾತನಾಡಿ ಗುಣಮಟ್ಟದ ಸೈಕಲ್‌ ಕೊಡಿಸುವಂತೆ ಮನವಿ ಮಾಡಿದ್ದರು.

ಉತ್ತಮ ಗುಣಮಟ್ಟದ ಸೈಕಲ್‌ ಕೊಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಭರವಸೆ ನೀಡಿದ್ದರು.

ಅದರಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ. ನಾರಾಯಣಗೌಡ ಹಾಗೂ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ
ಡಾ. ಶಾಲಿನಿ ರಜನೀಶ್‌ ಅವರು ಕ್ರೀಡಾ ಇಲಾಖೆ ಹಾಗೂ ದಾನಿಗಳ ಸಹಕಾರದೊಂದಿಗೆ Aergon – 18 E119ಸೈಕಲ್‌ ಅನ್ನು ಖರೀದಿಸಿ ಕು. ಪವಿತ್ರ ಅವರಿಗೆ, ಮುಖ್ಯಮಂತ್ರಿಗಳ ಹಸ್ತದಿ೦ದಲೇ ಕೊಡಿಸಿದ್ದಾರೆ.

ಆ ಮೂಲಕ ಕು. ಪವಿತ್ರ ಕನಸು ನನಸುಗೊಳಿಸಿ ಅ೦ತರಾಷ್ಟೀಯ
ಮಟ್ಟದ ಸೈಕ್ತಿಂಗ್‌ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಪ್ರಯತ್ನಕ್ಕೆ ಸಹಕಾರ ನೀಡಿದ್ದಾರೆ.

ಕು. ಪವಿತ್ರ ಅವರು ಸೈಕ್ಲಿಂಗ್‌ ಸ್ಪರ್ಧೆಯಲ್ಲಿ ಮಾಡಿದ ಸಾಧನೆ.

2018ರಲ್ಲಿ ಕುರುಕ್ಷೇತ್ರದಲ್ಲಿ ನಡೆದ ರೋಡ್‌ ಸೈಕ್ಲಿಂಗ್‌ 158.ಮಿ. ಸ್ಪರ್ಧೆಯಲ್ಲಿ 5ನೇ ಸ್ಥಾನ.
2019ರಲ್ಲಿ ಪುಣೆಯಲ್ಲಿ ನಡೆದ ರಾಷ್ಟ್ರಮಟ್ಟದ ಎಂ.ಟಿ.ಬಿ. ಸೈಕಲ್‌ ಸ್ಪರ್ಧೆಯಲ್ಲಿ 9ನೇ ಸ್ಥಾನ.
2021ರಲ್ಲಿ ಮೈಸೂರಿನಲ್ಲಿ ನಡೆದ ರಾಜ್ಯಮಟ್ಟದ ಎಂ.ಟಿ.ಬಿ. ಮೌಂಟೇನ್‌ ಬೈಕ್‌ ಸ್ಪರ್ಧೆಯಲ್ಲಿ 3ನೇ ಸ್ಥಾನ.
2021ರಲ್ಲಿ ಗದಗದಲ್ಲಿ ನಡೆದ ರಾಷ್ಟ್ರೀಯ ಎಂ.ಟಿ.ಬಿ. ಮೌಂಟೇನ್‌ ಬೈಕ್‌ ಸ್ಪರ್ಧೆಯಲ್ಲಿ 3ನೇ ಸ್ಥಾನ ಪಡೆದಿದ್ದಾರೆ.

ಈಗ ನ್ಯಾಶನಲ್‌ ಲೆವೆಲ್‌ ಗೇಮ್ಸ್‌ ಚಾಂಪಿಯನ್‌ ಶಿಪ್‌ಗೆ ಆಯ್ಕೆಯಾಗಿದ್ದಾರೆ.

ಪಂಜಾಬ್‌ನ ಪಟಿಯಾಲದಲ್ಲಿ ನಡೆಯಲಿರುವ ಖೇಲೋ ಇಂಡಿಯಾ ಟೀಮ್‌ಗೆ ಆಯ್ಕೆಯಾಗಿದ್ದು, ಈ ಕ್ಯಾಂಪಿನಲ್ಲಿ ಪಾಲ್ಗೊಳ್ಳಲು ಅಂತರಾಷ್ಟ್ರೀಯ ಮಟ್ಟದ ಸೈಕಲ್‌ ವಶ್ಯಕತೆ ಇತ್ತು. ಅದನ್ನು ಈಗ ಯುವ ಸಬಲೀಕರಣ ಸತ್ತು ಕ್ರೀಡಾ “ಇಲಾಖೆಯಿಂದ ನೀಡಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *