ರಾಜ್ಯ

ಡಿ.ಕೆ. ಶಿವಕುಮಾರ್ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಿ : ಎಸ್.ಆರ್. ಹಿರೇಮಠ ಪತ್ರ

ಧಾರವಾಡ prajakiran.com : ಅಕ್ರಮವಾಗಿ ಆಸ್ತಿ ಸಂಪಾಸಿದ ಆರೋಪದ ಮೇಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ, ಡಿ.ಕೆ.ಸುರೇಶ ಹಾಗೂ ಅವರ ಕುಟುಂಬದ ಸದಸ್ಯರ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್.ಐಆರ್ ದಾಖಲಿಸುವ ಜತೆಗೆ ಅವರನ್ನು ಜೈಲಿಗೆ ಕಳುಹಿಸಬೇಕು ಎಂದು ಸಮಾಜ ಪರಿವರ್ತನಾ ಸಮುದಾಯದ ಮುಖ್ಯಸ್ಥ ಎಸ್.ಆರ್.ಹಿರೇಮಠ ಆಗ್ರಹಿಸಿದರು.

ಅವರು ಬುಧವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ  ಮಾತನಾಡಿ, ಪ್ರಸ್ತುತ ಡಿ.ಕೆ.ಶಿವಕುಮಾರ ಮನೆಯ ಮೇಲಿನ ಸಿಬಿಐ ದಾಳಿ ಸ್ವಾಗತಾರ್ಹ ಕ್ರಮವಾಗಿದೆ ಎಂದರು.

ಡಿ.ಕೆ. ಶಿವಕುಮಾರ ಅವರ ಅಕ್ರಮ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದು ಒತ್ತಾಯಿಸಿದ್ದಾಗಿ ತಿಳಿಸಿದರು.

ಎಸ್.ಎಂ.ಕೃಷ್ಣ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಡಿ.ಕೆ.ಶಿವಕುಮಾರ ಮತ್ತು ಕೆಫೆ ಕಾಫಿ ಡೇ ವಿ.ಜಿ.ಸಿದ್ಧಾರ್ಥ ಅಕ್ರಮ ಗಳಿಕೆ ಮಾಡಿದ್ದರು ಎಂದು ನಾವು ಈ ಹಿಂದೆಯೇ ಹೇಳಿದ್ದೇವು.

 ಡಿಕೆಶಿ ಅಕ್ರಮ ಆಸ್ತಿಗಳ ಬಾಹು ಬಹಳ ವಿಸ್ತಾರವಿದೆ. ಡಿ.ಕೆ.ಶಿವಕುಮಾರ ಮತ್ತು ವಿ.ಜಿ. ಸಿದ್ಧಾರ್ಥ್ ಸೇರಿ ಇತ್ಯಾದಿ ಅಕ್ರಮದಲ್ಲಿ ಭಾಗಿ ಆಗಿದ್ದಾರೆ ಎಂದು ದೂರಿದರು.

ಡಿಕೆಶಿ ಕುಟುಂಬದ ಸದಸ್ಯರು ಆದಾಯಕ್ಕಿಂತ ಹೆಚ್ಚಿನ ಅಕ್ರಮ ಆಸ್ತಿ ಸಂಪಾದಿಸಿದ್ದು, ಸಿಬಿಐ ದಾಳಿಯಿಂದ ತಿಳಿದು ಬಂದಿದೆ.

ಸಾರ್ವಜನಿಕ ಕ್ಷೇತ್ರದಲ್ಲಿರುವ ಯಾವುದೇ ಮುಖಂಡರು ಇಂತಹ ದುಸ್ಸಾಹಸಕ್ಕೆ ಕೈ ಹಾಕದಂತೆ  ಇವರಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *