ಅಪರಾಧ

ಧಾರವಾಡ : ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸಾವು

ಧಾರವಾಡ prajakiran.com : ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ಧಾರವಾಡದ ಯರಿಕೊಪ್ಪ ಬೈಪಾಸ್ ಬಳಿ ನಡೆದಿದೆ.

ಇಲ್ಲಿನ ಹೊಸಯಲ್ಲಾಪುರದ ಅಮನ್ ಸೇರಿದಂತೆ ಇಬ್ಬರು ಯುವಕರು  ಮೃತಪಟ್ಟಿದ್ದು, ಮತ್ತೊಬ್ಬನ ಕಾಲಿಗೆ ಗಾಯವಾಗಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಹುಬ್ಬಳ್ಳಿ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿ ಮೃತಪಟ್ದಿದ್ದಾರೆ.

ಮೃತಪಟ್ಟರ ಪೈಕಿ ಓರ್ವನ ಗುರುತು ಸಿಕ್ಕಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ಮುಂದುವರೆದಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *