ಆರೋಗ್ಯ

ಮೊಡವೆ ಸಮಸ್ಯೆ ಕಡಿಮೆ ಮಾಡಲಿದೆ ದಾಸವಾಳ ಹೂ

  • ಮಹಿಳೆಯರಲ್ಲಿ ಬಿಳುಪು ಹೋಗುವುದಕ್ಕೆ ತಡೆಯಲು ಮೂರು ಬಿಳಿ ದಾಸವಾಳ ಹೂ ಆಕಳ ತುಪ್ಪದಲ್ಲಿ  ಉರಿದು ಖಾಲಿ ಹೊಟ್ಟೆಗೆ ತಿನ್ನುವುದರಿಂದ ಶಮನ.
  • ದಾಸವಾಳ ಹೂ ಸೇವನೆಯಿಂದ ದೇಹದ ಶಕ್ತಿ ವರ್ಧಿಸುತ್ತದೆ. ದೇಹದಲ್ಲಿರುವ ಬೇಡದ ಕಲ್ಮಶಗಳನ್ನು ಹೊರಹಾಕಿ, ಶಕ್ತಿ ವರ್ಧಕವಾಗಿ ಕೆಲಸ ಮಾಡುತ್ತದೆ.
  • ದಿನಾ ದಾಸವಾಳ ಹೂವಿನ ಜ್ಯೂಸ್ ಕುಡಿಯುವುದರಿಂದ ಮೊಡವೆ ಸಮಸ್ಯೆಯನ್ನು ಕಡಿಮೆ ಮಾಡಲು ಹಾಗೂ ಮೊಡವೆ ಆಗದಂತೆ ಸಹಾಯ ಮಾಡುತ್ತದೆ.
  • ದೇಹದಲ್ಲಿ ನೀರಿನಾಂಶ ಕಮ್ಮಿಯಾಗದಂತೆ ನೋಡಿಕೊಳ್ಳುವುದು. ಅದರಿಂದ ನೀರಿನಂಶದ ಕೊರತೆಯಿಂದ ಬಳಲುತ್ತಿರುವವರು ದಾಸವಾಳ ಹೂವಿನ ರಸ ಸೇವನೆ ಮಾಡುವುದು ಒಳಿತು.
  • ಕೊಲೆಸ್ಟ್ರಾಲ್ ಸಮಸ್ಯೆಯನ್ನು ಕಮ್ಮಿ ಮಾಡಲು ದಿನಾ ಎರಡು ದಾಸವಾಳದ ಹೂವನ್ನು ತಿನ್ನುವುದು ಒಳ್ಳೆಯದು.
  • ದೇಹದ ಉಷ್ಣತೆಯನ್ನು ಕಡಿಮೆ ಮಾಡಲು ದಾಸವಾಳ ಹೂವಿನ ರಸ ಕುಡಿಯುವುದು ಹಿತಕರ.
  • ತೆಂಗಿನ ಎಣ್ಣೆಯಲ್ಲಿ ದಾಸವಾಳ ಹೂವನ್ನು ಹಾಕಿ ಕಾಯಿಸಿ ಆ ಎಣ್ಣೆಯನ್ನು ಬಳಸಿದರೆ ಕೂದಲು ಉದುರುವ ಸಮಸ್ಯೆಯಿಂದ ಮುಕ್ತಿ ಹೊಂದಬಹುದು.
  • ಹೊಟ್ಟೆ ಹಸಿವು ಸರಿಯಾದ ರೀತಿಯಲ್ಲಿ ಆಗಲು ದಾಸವಾಳವನ್ನು ತಿನ್ನುವುದು ಒಳಿತು.

ಮಾಹಿತಿ : ಶಶಿಕಾಂತ ದೇವಾಡಿಗ, ನಾಟಿವೈದ್ಯರು.

http://prajakiran.com health tips

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *