ರಾಜ್ಯ

ಧಾರವಾಡ ಜಿಲ್ಲೆಯ ಕೋವಿಡ್ ಎಲ್ಲಾ ನಿರ್ಬಂಧಗಳ ತೆರವು

ಸುರಕ್ಷತಾ ಕ್ರಮಗಳ ಪಾಲನೆಗೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚನೆ

ಧಾರವಾಡ prajakiran. com ಮಾರ್ಚ್.2:

ಕೋವಿಡ್ ಸೋಂಕು ಬಹುತೇಕ ಇಳಿಮುಖವಾಗಿದ್ದು, ಕೋವಿಡ್ ನಿಯಂತ್ರಣಕ್ಕಾಗಿ ಜಾರಿಗೊಳಿಸಿದ್ದ ಎಲ್ಲಾ ರಂಗಗಳ ಮೇಲಿನ‌ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.

ಆದರೆ ಸಾರ್ವಜನಿಕರು ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು,ಲಸಿಕೆ ಪಡೆಯುವುದು ಸೇರಿದಂತೆ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ನಿತೇಶ್ ಕೆ.ಪಾಟೀಲ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು,ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದೆ.

ಜನಜೀವನ ಹಾಗೂ ಆರ್ಥಿಕತೆಗೆ ಮತ್ತೆ ಚೇತರಿಕೆ ಒದಗಿಸಲು,ಶಿಕ್ಷಣ ,ಸಾಂಸ್ಕೃತಿಕ, ಸಭೆ,ಸಮಾರಂಭಗಳು,ಕ್ರೀಡೆ,ಮನರಂಜನಾ ಚಟುವಟಿಕೆಗಳು, ಜಾತ್ರೆ ,ಉತ್ಸವಗಳು ಸೇರಿದಂತೆ ವಿವಿಧ ರಂಗಗಳ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ.

ಮದುವೆ,ಶವ ಸಂಸ್ಕಾರಗಳಲ್ಲಿ ಭಾಗವಹಿಸುವವರ ಸಂಖ್ಯೆಗೆ ಮಿತಿಗೊಳಿಸಲಾಗಿದ್ದ ನಿರ್ಬಂಧಗಳನ್ನು ಕೂಡ ಮುಕ್ತಗೊಳಿಸಲಾಗಿದೆ.

ಸಿನೆಮಾ,ನಾಟಕ ಥೇಟರುಗಳು, ಶಾಲೆ,ಕಾಲೇಜು,ಗ್ರಂಥಾಲಯ, ತರಬೇತಿ ಕೇಂದ್ರಗಳು ,ಕ್ರೀಡಾ ಚಟುವಟಿಕೆಗಳು,ಎಲ್ಲಾ ವಾಣಿ ವಹಿವಾಟುಗಳಿಗೂ ಕೂಡ ಯಾವುದೇ ನಿರ್ಬಂಧಗಳು ಇರುವುದಿಲ್ಲ.

ಸಭೆ,ಸಮಾರಂಭ,ವಹಿವಾಟುಗಳಿಗೆ ಪೂರ್ವಾನುಮತಿಯ ಅಗತ್ಯ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಕೋವಿಡ್ ನಿಯಂತ್ರಣಕ್ಕೆ ಮಾಸ್ಕ್ ಧರಿಸುವುದು,ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಮತ್ತಿತರ ಸುರಕ್ಷತಾ ಕ್ರಮಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು

.15 ರಿಂದ 18 ವರ್ಷದವರೂ ಸೇರಿ ಅರ್ಹ ವಯೋಮಾನದವರೆಲ್ಲರೂ ಮೊದಲ ಮತ್ತು ಎರಡನೇ ಡೋಸ್ ಲಸಿಕೆ ಪಡೆಯಬೇಕು.ಆರೋಗ್ಯ, ಮುಂಚೂಣಿ ಕಾರ್ಯಕರ್ತರು, ಸಹ ಅಸ್ವಸ್ಥತೆ (ಕೊ-ಮಾರ್ಬಿಡಿಟಿ) ಹೊಂದಿದ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಬೂಸ್ಟರ್ ಡೋಸ್ ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿಗಳು ಕೋರಿದ್ದಾರೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *