ರಾಜ್ಯ

ಧಾರವಾಡ ಜಿಲ್ಲೆಯಲ್ಲಿ ಜೂ. 1ರಿಂದ ಹೋಟೆಲ್, ಮದ್ಯದಂಗಡಿ ಪಾರ್ಸೆಲ್ ಅವಕಾಶ ನೀಡಿದ ಜಿಲ್ಲಾಧಿಕಾರಿ : ಕಿರಾಣಿ ವರ್ತಕರಿಗೆ ತೀವ್ರ ನಿರಾಶೆ

ಧಾರವಾಡ prajakiran.com : ಧಾರವಾಡ ಜಿಲ್ಲೆಯಾದ್ಯಂತ ಕರೋನಾ ಪಾಸಿಟಿವ್ ಸಂಖ್ಯೆ ಹೆಚ್ಚಾಗಿದ್ದರಿಂದ ಜಿಲ್ಲೆಯಲ್ಲಿ ಕಠಿಣ ಲಾಕ್ ಡೌನ್ ಘೋಷಿಸಲಾಗಿದೆ.

ಹೀಗಾಗಿ ಬೆಳಗ್ಗೆ 6ರಿಂದ 8 ಗಂಟೆಯವರೆಗೆ ಮಾತ್ರ ಹಾಲು, ಹಣ್ಣು, ತರಕಾರಿ ಮಾರಾಟಕ್ಕೆ ಅವಕಾಶ ನೀಡಲಾಗಿತ್ತು.

ಇದೀಗ ಹೋಟೆಲ್ ಒಡೆಯರ ಸಂಘದ ಮನವಿ ಮೇರೆಗೆ ಜಿಲ್ಲೆಯಲ್ಲಿ ಜೂನ್ 1 ರಿಂದ 6 ರವರೆಗೆ ಬೆಳಿಗ್ಗೆ 6 ರಿಂದ 8 ರವರೆಗೆ ಹೋಟೆಲ್ ಅಂಗಡಿಗಳು ಕೇವಲ ಪಾರ್ಸೆಲ್ ನೀಡಲು ಅವಕಾಶ ಕಲ್ಪಿಸಲಾಗಿದೆ.

ಜೂನ್ 1 ರಿಂದ 6 ರವರೆಗೆ ಬೆಳಿಗ್ಗೆ 8 ರಿಂದ ಸಂಜೆ 4 ರವರೆಗೆ ಹೋಟೆಲ್ ತೆಗೆದು ಕೇವಲ ಹೋಂ ಡೆಲೆವರಿ ನೀಡುವ ಅವಕಾಶವಿದೆ.

ಅದೇ ರೀತಿ ಜೂನ್ 1 ರಿಂದ 6 ರವರೆಗೆ ಬೆಳಿಗ್ಗೆ 6 ರಿಂದ 8 ರವರೆಗೆ ಮದ್ಯದಂಗಡಿಗಳನ್ನು ತೆಗೆದು ಕೇವಲ ಪಾರ್ಸಲ್ ನೀಡಲು  ಅವಕಾಶ ಕಲ್ಪಿಸಿ ಧಾರವಾಡ ಜಿಲ್ಲಾಧಿಕಾರಿಗಳಾದ ನಿತೇಶ್ ಪಾಟೀಲ ಆದೇಶ ಹೊರಡಿಸಿದ್ದಾರೆ.

ಆದರೆ ದುರಾದೃಷ್ಟವಶಾತ್ ಅಗತ್ಯ ಸೇವೆಯಲ್ಲಿ ಬರುವ ಕಿರಾಣಿ ಅಂಗಡಿಗಳ ಮಾರಾಟಕ್ಕೆ ಅವಕಾಶ ನೀಡದಿರುವುದು ವ್ಯಾಪಾರಸ್ಥರ ಹಾಗೂ ವರ್ತಕರ ಅಸಮಾಧಾನಕ್ಕೆ ಕಾರಣವಾಗಿದೆ.

ಸಣ್ಣಪುಟ್ಟ ವ್ಯಾಪಾರಸ್ಥರು ಜೀವನ ನಡೆಸುವುದು ಬಹಳ ಕಷ್ಟಕರವಾಗಿದೆ. ಅದರ ಮೇಲೆ ಅವಲಂಬಿತರಾಗಿರುವವರಿಗೆ ಜಿಲ್ಲಾಧಿಕಾರಿ ಆದೇಶ ತೀವ್ರ ನೋವುಂಟು ಮಾಡಿದೆ.

ಈ ಹಿಂದೆ ನೀಡಿದ್ದ ಮೂರು ದಿನಗಳ ಅವಕಾಶವನ್ನೇ ಮುಂದೆ ಇಟ್ಟುಕೊಂಡು ಈಗ ಅವರಿಗೆ ನಿರಾಶೆ ಮಾಡಿರುವುದು ಸರಿಯಾದ ಕ್ರಮವಲ್ಲ ಎಂದು ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಪಿ.ಎಚ್. ನೀರಲಕೇರಿ ತಿಳಿಸಿದ್ದಾರೆ.

ಜಿಲ್ಲಾಧಿಕಾರಿ ತಮ್ಮ ಆದೇಶವನ್ನು ಪುನರ್ ಪರಿಶೀಲನೆ ನಡೆಸಿ, ಕಿರಾಣಿ ಮಾರಾಟಕ್ಕೆ ಅವಕಾಶ ನೀಡಬೇಕು.

ಇದರಲ್ಲಿ ಮಧ್ಯಮ ವರ್ಗ, ಕೂಲಿ ಕಾರ್ಮಿಕರು, ಶ್ರಮಿಕ ವರ್ಗದ ಜನರ ಸಂಕಷ್ಟವನ್ನು ಕೂಡ ಪರಿಗಣಿಸಬೇಕು. ಬಳಕೆದಾರರನ್ನು ಅಲಕ್ಷ್ಯ ಮಾಡಿರುವುದು ಸರಿಯಾದ ಬೆಳವಣಿಗೆ ಅಲ್ಲ.

ಗ್ರಾಹಕರ ಹಿತಾಸಕ್ತಿಯನ್ನು ಕಾಪಾಡಲು ಕಿರಾಣಿ ವ್ಯಾಪಾರ ನಡೆಸಲು ಅವಕಾಶ ನೀಡಬೇಕು.

ಅಲ್ಲದೆ ಈ ನಿಟ್ಟಿನಲ್ಲಿ ನಮ್ಮ ಜಿಲ್ಲೆಯ ಜನಪ್ರತಿನಿಧಿಗಳು ಕೂಡ ಎಚ್ಚೆತ್ತುಕೊಂಡು ಅವರ ನೋವಿಗೆ ಸ್ಪಂದಿಸಬೇಕಿದೆ ಎಂದು ಪಿ.ಎಚ್ ನೀರಲಕೇರಿ ಆಗ್ರಹಿಸಿದ್ದಾರೆ

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *