ರಾಜ್ಯ

ದಕ್ಷಿಣ ಕನ್ನಡ, ವಿಜಯಪುರ, ಚಿತ್ರದುರ್ಗ ಜಿಲ್ಲಾಧಿಕಾರಿ ಸೇರಿ ಹಲವು ಐ ಎ ಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರಕಾರ ಒಂದು ವರ್ಷವನ್ನು ಯಶಸ್ವಿಯಾಗಿ ಪೂರೈಸಿದ ಬೆನ್ನಲ್ಲೇ ಹತ್ತು ಹಲವು ಐ ಎ ಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ಹಿರಿಯ ಐ ಎ ಎಸ್ ಅಧಿಕಾರಿಗಳ ರಾಜಕುಮಾರ ಖತ್ರಿ ಅವರನ್ನು ಕೃಷಿ ಇಲಾಖೆಯಿಂದ ಕಾರ್ಮಿಕ ಇಲಾಖೆಗೆ ವರ್ಗಾವಣೆ ಮಾಡಿದೆ. ಕಾರ್ಮಿಕ ಇಲಾಖೆಯ ಹೆಚ್ಚುವರಿ ಮುಖ್ಯಕಾರ್ಯದರ್ಶಿಯಾಗಿದ್ದ ಮಹೇಶ್ವರ ರಾವ್ ಎ. ಅವರ ಸ್ಥಾನಕ್ಕೆ ನಿಯೋಜಿಸಿದೆ.

ಎನ್. ನಾಗಾಂಬಿಕಾ ದೇವಿ ಅವರನ್ನು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮಹಿಳಾ ಮತ್ತು ಮಕ್ಕಳಅಭಿವೃದ್ದಿ ಇಲಾಖೆ ಇವರನ್ನು ಅದೇ ಹುದ್ದೆಯನ್ನು ಮುಂದುವರೆಸಿ ಹೆಚ್ಚುವರಿಯಾಗಿ ಸಮಾಜ ಕಲ್ಯಾಣ ಇಲಾಖೆಯ  ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ ನಾಯ್ಕಅವರನ್ನು ವರ್ಗಾಯಿಸಿದೆ.

ಕರ್ನಾಟಕ ಪಬ್ಲಿಕ್ ಲ್ಯಾಂಡ್ ಕಾರ್ಪೋರೇಶನ್ ವ್ಯವಸ್ಥಾಪಕ ನಿರ್ದೇಶಕ ಮನೋಜ ಜೈನ್ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರು (ಯೋಜನೆ) ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ವ್ಯವಸ್ಥಾಪಕ ನಿರ್ದೇಶಕ ರಾಜೇಂದ್ರ ಚೋಳನ್ ಅವರನ್ನ ಬಿಬಿಎಂಪಿ ವಿಶೇಷ ಆಯುಕ್ತರು (ಹಣಕಾಸು ಹಾಗೂ ತಂತ್ರಜ್ಞಾನ) ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ.

ಚಿತ್ರದುರ್ಗ ಜಿಲ್ಲಾಧಿಕಾರಿ ವಿನೂತ ಪ್ರಿಯಾ ಅವರನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆ ನಿರ್ದೇಶಕರ ಹುದ್ದೆಗೆ ನಿಯೋಜಿಸಲಾಗಿದೆ.

ಮೈಸೂರು ಶುಗರ್ ಕಂಪನಿ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಬಿ.ಆರ್. ಮಮತಾ ಅವರನ್ನು ಹೆಚ್ಚುವರ ನಿರ್ದೇಶಕರು ಸಕಾಲ ಮಿಶನ್ ಗೆ ವರ್ಗಾವಣೆ ಮಾಡಲಾಗಿದೆ.

ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರನ್ನು ಮೈಸೂರು ಆಡಳಿತ ತರಬೇತಿ ಕೇಂದ್ರದ ಜಂಟಿ ನಿರ್ದೇಶಕರ ಹುದ್ದೆಗೆ ನಿಯೋಜಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧು ರೂಪೇಶ ಅವರನ್ನು ಬೆಂಗಳೂರು ಇಡಿಸಿಎಸ್ ಹಾಗೂ ಡಿಪಿ ಎ ಆರ್  (ಇ ಆಡಳಿತ)  ನಿರ್ದೇಶಕರ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ.

ಬೆಳಗಾವಿ ಜಿಪಂ ಸಿಇಒ ರಾಜೇಂದ್ರ ಕೆ.ವಿ. ಅವರನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ಕೋಲಾರ ಜಿಪಂ ಸಿಇಒ ದರ್ಶನ್ ಹೆಚ್.ವಿ. ಅವರನ್ನು ಬೆಳಗಾವಿ ಜಿಪಂ ಸಿಇಒ ಆಗಿ ವರ್ಗಾವಣೆ ಮಾಡಲಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *