ಜಿಲ್ಲೆ

ಸೂಚನೆ ಪಾಲಿಸದ ಆಸ್ಪತ್ರೆ ವಿರುದ್ಧ ಕ್ರಮದ ಎಚ್ಚರಿಕೆ ನೀಡಿದ ಧಾರವಾಡ ಜಿಲ್ಲಾಧಿಕಾರಿ  

ಧಾರವಾಡ prajakiran.com : ಕೆಪಿಎಂಇ ಕಾಯ್ದೆಯಡಿ ನೋಂದಣಿ ಮಾಡಿಕೊಂಡು ಕಾರ್ಯನಿರ್ವಹಿಸುತ್ತಿರುವ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್‌ಗಳು ಪ್ರತಿದಿನ ತಮಲ್ಲಿ ಚಿಕಿತ್ಸೆಗೆ ಬರುವ ಕೆಮ್ಮು, ನೆಗಡಿ ಹಾಗೂ ತೀವ್ರ ಜ್ವರ (ಐಎಲ್‌ಐ) ಲಕ್ಷಣಗಳಿರುವ ವ್ಯಕ್ತಿಗಳ ಹೆಸರು ಮತ್ತು ವಿಳಾಸ ಹಾಗೂ ಸಂಪರ್ಕ ಸಂಖ್ಯೆ ಮಾಹಿತಿಯನ್ನು ಕೆಪಿಎಂಇ ಪೋರ್ಟ್ಲ್‌ನಲ್ಲಿ ಕಡ್ಡಾಯವಾಗಿ ಅಪ್‌ಡೇಟ್ ಮಾಡಬೇಕು.

ಈ ಸೂಚನೆಯನ್ನು ಪಾಲಿಸದ ಆಸ್ಪತ್ರೆಗಳ ವಿರುದ್ಧ ಸಾಂಕ್ರಾಮಿಕ ರೋಗಗಳ ತಡೆ ಕಾಯ್ದೆಯಡಿ ಶಿಸ್ತುಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ಸೂಚನೆ ನೀಡಿದ್ದಾರೆ.

ಅವರು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿಂದು ಜಿಲ್ಲಾ ಆರೋಗ್ಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. 




ಜಿಲ್ಲೆಯಲ್ಲಿ ೧,೨೭೨ ಕ್ಕೂ ಹೆಚ್ಚು ಕೆಪಿಎಂಇ ನೋಂದಾಯಿತ ಆಸ್ಪತ್ರಗಳಿವೆ. ಅವುಗಳಲ್ಲಿ ಕೆಲವು ಸಕ್ರಿಯವಾಗಿಲ್ಲ. ಕಾರ್ಯನಿರ್ವಹಿಸದಿರುವ ಆಸ್ಪತ್ರೆಗಳ ಕುರಿತು ಖುದ್ದು ಪರಿಶೀಲನೆ ಆಗಬೇಕು.

ಖಾಸಗಿಯಾಗಿ ವೃತ್ತಿ ನಿರ್ವಹಿಸುತ್ತಿರುವ ಎಲ್ಲಾ ಅಲೋಪತಿ ಹಾಗೂ ವಿವಿಧ ಆಯುಷ್ ಪದ್ಧತಿಗಳ ವೈದ್ಯರು ತಮ್ಮ ಬಳಿ ಚಿಕಿತ್ಸೆಗೆ ಬರುವ ರೋಗಿಗಳಲ್ಲಿ ನೆಗಡಿ ಹಾಗೂ ತೀವ್ರ ಜ್ವರ (ಐಎಲ್‌ಐ) ಲಕ್ಷಣಗಳಿರುವ ವ್ಯಕ್ತಿಗಳು ಕಂಡುಬಂದರೆ ಕೂಡಲೇ ಆ ಕುರಿತ ಮಾಹಿತಿಯನ್ನು ಕೆಪಿಎಂಇ ಪೋರ್ಟಲ್ ಮೂಲಕ ಜಿಲ್ಲಾಡಳಿತಕ್ಕ ಒದಗಿಸಬೇಕು.

ಈ ಸೂಚನೆಯನ್ನು ಪಾಲಿಸದ ಆಸ್ಪತ್ರೆಗಳು ಮತ್ತು ವೈದ್ಯರಿಗೆ ಕಾರಣ ಕೇಳಿ ನೋಟೀಸ್ ಜಾರಿ ಮಾಡಿ, ನಂತರ ಕೆಪಿಎಂಇ ನೋಂದಣಿಯನ್ನು ಅಮಾನತು ಮಾಡಲಾಗುವುದು ಎಂದರು.




ಜಿಲ್ಲೆಯ ರೈಲು, ವಿಮಾನ ನಿಲ್ದಾಣಗಳಲ್ಲಿ ಹೊರ ರಾಜ್ಯಗಳಿಂದ ಆಗಮಿಸುವ ಜನರ ಮಾಹಿತಿ ಪ್ರತಿದಿನ ಕ್ರೊಢೀಕರಿಸಲಾಗುತ್ತಿದೆ.

ಸೇವಾಸಿಂಧು ಪೋರ್ಟ್ಲ್‌ನಲ್ಲಿ ನೋಂದಣಿ ಮಾಡಿಕೊಂಡಿರುವ ಜನರಲ್ಲಿ  ಎಷ್ಟು ಜನ ಜಿಲ್ಲೆಗೆ ಆಗಮಿಸಿದ್ದಾರೆ ಎಂಬುದನ್ನು ಪರಿಶೀಲಿಸಬೇಕು.  ಈ ಮಾಹಿತಿಯನ್ನು ಐಎಸ್‌ಟಿ ಮೊಬೈಲ್ ಆ್ಯಪ್‌ನಲ್ಲಿ ಅಪ್‌ಡೇಟ್ ಮಾಡಬೇಕು.

 ಜಿಲ್ಲೆಯಲ್ಲಿ ಗುರುತಿಸಲಾಗಿರುವ ಕೋವಿಡ್ ಕೇರ್ ಸೆಂಟರ್‌ಗಳಲ್ಲಿ ಪ್ರತಿನಿತ್ಯ ಮೂರು ಪಾಳಿಗಳಲ್ಲಿ ಕರ್ತವ್ಯ ನಿರ್ವಹಿಸಲು ಅಗತ್ಯವಿರುವ ವೈದ್ಯರು, ನರ್ಸ್ ಹಾಗೂ ಗ್ರೂಪ್ ‘ಡಿ’ ಸಿಬ್ಬಂದಿಯ ಪಟ್ಟಿ ಮಾಡಿಟ್ಟುಕೊಳ್ಳಬೇಕು.

ಮಹಾನಗರ ಪಾಲಿಕೆ ಮತ್ತು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಮಾಸ್ಕ್ ಧರಿಸದ, ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವ ವ್ಯಕ್ತಿಗಳಿಂದ ದಂಡ ಸಂಗ್ರಹಿಸುವ ಕಾರ್ಯ ಚುರುಕುಗೊಳಿಸಬೇಕು. 





ಸರ್ಕಾರದ ಪರಿಷ್ಕೃತ ಮಾರ್ಗಸೂಚಿಗಳಂತೆ ಕೊಳಚೆ ಪ್ರದೇಶದ ನಿವಾಸಿಗಳು, ಬೀದಿ ಬದಿ ವ್ಯಾಪಾರಸ್ಥರು, ಮಾಲ್, ಸುಪರ್ ಮಾರ್ಕೇಟ್‌ಗಳಲ್ಲಿ ಕಾರ್ಯನಿರ್ವಹಿಸುವ ಕೆಲಸಗಾರರು, ಹೋಟೆಲ್‌ಗಳ ಪಾರ್ಸಲ್ ಸೇವೆ ಮತ್ತು ಕೋರಿಯರ್ ಸೇವೆ ನೀಡುವ ಡೆಲಿವರಿ ಬಾಯ್ಸ್ಗಳ ಹಾಗೂ ೫೦ ವರ್ಷ ಮೇಲ್ಪಟ್ಟ ಮಧುಮೇಹಿಗಳು ಮತ್ತು ಇತರ ದುರ್ಬಲ ಆರೋಗ್ಯ ಹೊಂದಿರುವವರನ್ನು ಆದ್ಯತೆಯ ಮೇಲೆ ರ‍್ಯಾಂಡಮ್ ಆಗಿ ಆಯ್ದುಕೊಂಡು ಆರ್‌ಟಿಪಿಸಿಆರ್ ಪೂಲ್ಡ್ ತಂತ್ರಜ್ಞಾನ ಮೂಲಕ ಕೋವಿಡ್ ತಪಾಸಣೆಗೆ ಒಳಪಡಿಸಬೇಕು ಎಂದು ಜಿಲ್ಲಾಧಿಕಾರಿಗಳು ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

 ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ: ಯಶವಂತ ಮದೀನಕರ, ಕಿಮ್ಸ್ ತಜ್ಞವೈದ್ಯ ಡಾ: ಲಕ್ಷ್ಮಿಕಾಂತ, ಸ್ಮಾರ್ಟ್ ಸಿಟಿ ಯೋಜನೆಯ ವಿಶೇಷಾಧಿಕಾರಿ ಎಸ್.ಎಚ್. ನರೇಗಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ: ಸುಜಾತಾ ಹಸವೀಮಠ, ಡಾ: ಶಶಿ ಪಾಟೀಲ, ಡಾ: ಎಸ್.ಎಂ. ನಿಂಬಣ್ಣವರ, ಡಾ: ಎಸ್.ಎಂ. ಹೊನಕೇರಿ, ಡಾ: ತನುಜಾ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.



PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *