ಅಂತಾರಾಷ್ಟ್ರೀಯ

ಸಚಿವ ರಮೇಶ ಜಾರಕಿಹೊಳಿಗೆ ಪತ್ರ ಬರೆದ ಡಿಸಿಎಂ ….!

ಮಲಪ್ರಭಾ ನದಿಗೆ ಒತ್ತುವರಿ ಕಂಟಕ

ಬೆಂಗಳೂರು prajakiran.com : ಉತ್ತರಕರ್ನಾಟಕದ ಜೀವನಾಡಿ ಮಲಪ್ರಭಾ ನದಿ ತೀರದಲ್ಲಿ ಅತಿಯಾದ ಮಾನವನ ದುರಾಸೆಯಿಂದ ಒತ್ತುವರಿ ಪರಿಣಾಮ ನದಿ ಪ್ರವಾಹದಿಂದ ಬೆಳಗಾವಿ, ಧಾರವಾಡ, ಗದಗ ಹಾಗೂ ಬಾಗಲಕೋಟೆ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಪಾರ ಆಸ್ತಿಪಾಸ್ತಿ ಹಾನಿಯುಂಟಾಗುತ್ತಿದೆ.

ಆದುದ್ದರಿಂದ ಮಲಪ್ರಭಾ ನದಿ ಪಾತ್ರದ ಒತ್ತುವರಿ ತೆರವುಗೊಳಿಸುವುದಕ್ಕೆ ಸರಕಾರ ಕ್ರಮ ಕೈಗೊಳ್ಳಬೇಕಾಗುತ್ತದೆ. 

ಹೀಗಾಗಿ ಮಲಪ್ರಭಾ ನದಿಯ ಉಳಿವಿಗೆ ಒತ್ತುವರಿ ತೆರವುಗೊಳಿಸಿ, ಶಾಶ್ವತ ಪರಿಹಾರ ಕಂಡು ಕೊಳ್ಳುವ ಮತ್ತು ಪ್ರವಾಹ ನಿಯಂತ್ರಿಸುವ ಬಗ್ಗೆ ನಾಲ್ಕು ಜಿಲ್ಲೆಗಳ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆ ನಿಗದಿಪಡಿಸಿ, ತುರ್ತು ಪರಿಹಾರ ಕಂಡುಕೊಳ್ಳುವ ಬಗ್ಗೆ ಕ್ರಮವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ವಿನಂತಿಸಲಾಗಿದೆ ಎಂದು ಉಪಮುಖ್ಯಮಂತ್ರಿಯೂ ಆಗಿರುವ ಲೋಕೋಪಯೋಗಿ ಹಾಗೂ ಸಮಾಜ ಕಲ್ಯಾಣ ಸಚಿವ ಗೋವಿಂದ ಕಾರಜೋಳ ಅವರು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರಿಗೆ ಆ. 23ರಂದು ಪತ್ರ ಬರೆದಿದ್ದಾರೆ.

ಈ ಪತ್ರಕ್ಕೆ ಜಲಸಂಪನ್ಮೂಲ ಸಚಿವ ರಮೇಶಜಾರಕಿಹೊಳಿಯವರು ಯಾವ ರೀತಿ ಸ್ಪಂದಿಸುತ್ತಾರೆ ಎಂಬುದು ಕಾದು ನೋಡಬೇಕಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *