ನವದೆಹೆಲಿ prajakiran.com : ಮಹಾಮಾರಿ ಕೊರೋನಾ ಇಡೀ ದೇಶವನ್ನೇ ನಲುಗಿಸುತ್ತಿದೆ.
ಸೋಂಕಿತರ ಸಂಖ್ಯೆಯಲ್ಲಿ ಕಳೆದ 24 ಗಂಟೆಯಲ್ಲಿ 4,01,078 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದ, 4,187 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 4,01,078 ಹೊಸ ಸೋಂಕು ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 2,18,92,676ರಷ್ಟು ಹೆಚ್ಚಾಗಿದೆ.
ನಿನ್ನೆ ದೇಶದಲ್ಲಿ 3,18,609 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 1,79,30,960ಕ್ಕೆ ಏರಿಕೆಯಾಗಿದೆ.
ಇನ್ನು ಶುಕ್ರವಾರ ದೇಶಾದ್ಯಂತ 4,187 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,38,270 ಕ್ಕೆ ಏರಿಕೆಯಾಗಿದೆ.