ಅಂತಾರಾಷ್ಟ್ರೀಯ

ಚೇತರಿಸಿಕೊಳ್ಳುತ್ತಿದೆ ಭಾರತ, ಸಾವಿನ ಸಂಖ್ಯೆಯಲ್ಲಿಯೂ ಗಣನೀಯ ಇಳಿಕೆ

ನವದೆಹೆಲಿ prajakiran.com : ದೇಶದಲ್ಲಿ ಕೊರೋನಾ ಎರಡನೇ ಅಲೆಯನ್ನು ತಡೆಗಟ್ಟಲು ಹಲವಾರು ರಾಜ್ಯಗಳು ಲಾಕ್‌ಡೌನ್ ಜಾರಿಗೊಳಿಸಿದ್ದರಿಂದ ಕೊಂಚ ಮಟ್ಟಿಗೆ ಭಾರತ ಚೇತರಿಸಿಕೊಳ್ಳುತ್ತಿದೆ.

ಕಳೆದ 24 ಗಂಟೆಯಲ್ಲಿ 2,76,070 ಹೊಸ ಕೊರೋನಾ ಪ್ರಕರಣಗಳು ವರದಿಯಾಗಿವೆ. ಸಾವಿನ ಸಂಖ್ಯೆ 3,874 ಕ್ಕೆ ಇಳಿಕೆಯಾಗಿದೆ.

ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,76,070 ಹೊಸ ಸೋಂಕು ಪ್ರಕರಣಗಳು ವರದಿಯಾಗಿದೆ.

ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆಯಲ್ಲಿ 2,57,72,400 ರಷ್ಟಾಗಿದೆ.

ದೇಶದಲ್ಲಿ ಬುಧವಾರ 3,69,077 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಇದರೊಂದಿಗೆ ಗುಣಮುಖರಾದವರ ಸಂಖ್ಯೆ 2,23,55,440ಕ್ಕೆ ಏರಿಕೆಯಾಗಿದೆ.

ಪ್ರಸ್ತುತ ದೇಶದಲ್ಲಿ 31,29,878ರಷ್ಟು ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ದೇಶಾದ್ಯಂತ 24 ಗಂಟೆಗಳಲ್ಲಿ 3,874 ಮಂದಿ ಸೋಂಕಿತರು ಮೃತಪಟ್ಟಿದ್ದು, ಸೋಂಕಿಗೆ ಬಲಿಯಾದವರ ಸಂಖ್ಯೆ 2,87,122 ಕ್ಕೆ ಏರಿಕೆಯಾಗಿದೆ.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *