ನವದೆಹಲಿ Prajakiran.com : ದೇಶದಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 2,40,842 ಹೊಸ ಕೊರೋನಾ ಪ್ರಕರಣಗಳು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಸಚಿವಾಲಯ ನೀಡಿರುವ ಮಾಹಿತಿಯ ಪ್ರಕಾರ, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 2,40,842 ಹೊಸ ಸೋಂಕು ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 2,65,30,132 ರಷ್ಟಾಗಿದೆ.
ಇನ್ನೂ ನಿನ್ನೆ ಒಂದೇ ದಿನ ದೇಶದಲ್ಲಿ 3,55,102 ಕೊರೋನಾ ಸೋಂಕಿತರು ಗುಣಮುಖರಾಗಿದ್ದು, ಗುಣಮುಖರಾದವರ ಸಂಖ್ಯೆ 2,34,25,467 ಕ್ಕೆ ಏರಿಕೆಯಾಗಿದೆ.
ಪ್ರಸ್ತುತ ದೇಶದಲ್ಲಿ 28,05,399 ಸೋಂಕಿತರು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇಶಾದ್ಯಂತ ಶನಿವಾರ 3,741 ಮಂದಿ ಸೋಂಕಿತರು ಮೃತಪಟ್ಟಿದ್ದು, ಕೊರೋನಾ ಸೋಂಕಿಗೆ ಬಲಿಯಾದವರ ಸಂಖ್ಯೆ 2,99,266 ಕ್ಕೆ ಏರಿಕೆಯಾಗಿದೆ.