ನವದೆಹೆಲಿ prajakiran.com : ದೆಹಲಿಯಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ.
ಹೀಗಾಗಿ ಸೋಂಕು ನಿಯಂತ್ರಿಸಲು ಮತ್ತೆ ಒಂದು ವಾರ ಲಾಕ್ ಡೌನ್ ಮಾಡಲಾಗುವುದೆಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಘೋಷಿಸಿದ್ದಾರೆ.
ಕಳೆದ ವಾರ ಘೋಷಣೆಯಾಗಿದ್ದ ಲಾಕ್ಡೌನ್ ನಾಳೆ ಮುಕ್ತಾಯವಾಗಲಿದೆ.
ಅದು ಅಲ್ಲದೇ ನಿನ್ನೆ ಒಂದೇ ದಿದಲ್ಲಿ 347 ಮಂದಿ ಕೊರೋನ ಸೋಂಕಿನಿಂದ ಮೃತಪಟ್ಟಿದ್ದಾರೆ.
ಈ ಕಾರಣದಿಂದ ಇದೀಗ ಮತ್ತೇ ಮೇ.3ರ ವರೆಗೆ ಲಾಕ್ಡೌನ್ ಮುಂದುವರೆಯಲಿದೆ ಎಂದಿದ್ದಾರೆ.
ರಾಜ್ಯದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಜೊತೆಯಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.