ಅಂತಾರಾಷ್ಟ್ರೀಯ

ವಿಶ್ವದ 100 ದೇಶಗಳಲ್ಲಿ ಡೆಲ್ಟಾ ರೂಪಾಂತರಿ ಸೋಂಕು : ಆತಂಕ ವ್ಯಕ್ತಪಡಿಸಿದ ವಿಶ್ವ ಆರೋಗ್ಯ ಸಂಸ್ಥೆ

ನವದೆಹಲಿ prajakiran.com : ವಿಶ್ವದ 100 ದೇಶಗಳಲ್ಲಿ ಕೊರೋನಾ ರೂಪಾಂತರಿ ಡೆಲ್ಟಾ ಸೋಂಕು ಪತ್ತೆಯಾಗಿರುವುದು ಆತಂಕಕಾರಿ ಎಂದು ವಿಶ್ವ ಆರೋಗ್ಯ ಸಂಸ್ಥೆ ಮುಖ್ಯಸ್ಥ ಟೆಡ್ರೊಸ್ ಅಧಾನಮ್ ಘೆಬ್ರೆಯೆಸಸ್ ತಿಳಿಸಿದ್ದಾರೆ.

ಕಳೆದ ಅಕ್ಟೋಬರ್‌ನಲ್ಲಿ ಭಾರತದಲ್ಲಿ ಮೊದಲ ಬಾರಿಗೆ ಪತ್ತೆಯಾದ ಈ ರೂಪಾಂತರಿ ಸೋಂಕು ಅಪಾಯಕಾರಿಯಾಗಿದ್ದು, ಅನೇಕ ದೇಶಗಳಲ್ಲಿ ಕೊರೋನಾ ಅತ್ಯಂತ ಪ್ರಬಲ ರೂಪಾಂತರಿಯಾಗಿದೆ.

ಸಾರ್ವಜನಿಕ ಆರೋಗ್ಯ ಪ್ರತಿಕ್ರಿಯೆ ಎಚ್ಚರಿಕೆಯಿಂದ ನಿಭಾಯಿಸುವುದು ಅಗತ್ಯವಿದೆ ಎಂದು ಎಚ್ಚರಿಸಿದರು.

ಕಡಿಮೆ ಲಸಿಕೆ ಅಭಿಯಾನ ಹೊಂದಿರುವ ದೇಶಗಳ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ಭಯಾನಕ ದೃಶ್ಯಗಳು ಕಾಣುತ್ತಿದೆ.

ಹಾಗಾಗಿ ಕೊರೋನಾ ನಿಭಾಯಿಸಲು ನಿಜವಾದ ಜಾಗತಿಕ ಆರ್ಥಿಕ ಚೇತರಿಕೆಗೆ ಚಾಲನೆ ನೀಡಲು ಮತ್ತು ಮತ್ತಷ್ಟು ಅಪಾಯಕಾರಿ ಸೋಂಕನ್ನು ನಿಭಾಯಿಸಲು ಲಸಿಕೆ ಅತ್ಯುತ್ತಮ ಮಾರ್ಗವಾಗಿದೆ ಎಂದರು.

ಮುಂದಿನ ವರ್ಷದ ವೇಳೆಗೆ ಪ್ರತಿ ದೇಶದ ಶೇ.70ರಷ್ಟು ಜನರಿಗೆ ಕೊರೋನಾ ಲಸಿಕೆ ಮನವಿ ಮಾಡಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *