ರಾಜ್ಯ

ಹುಬ್ಬಳ್ಳಿ-ಧಾರವಾಡ ಪೊಲೀಸರಿಗೆ ಚುರುಕು ಮುಟ್ಟಿಸಿದ ಡಿಜಿಪಿ

ಹುಬ್ಬಳ್ಳಿ prajakiran.com  : ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರು ಬುಧವಾರ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪೊಲೀಸ್ ಇಲಾಖೆ ವಿವಿಧ ಪ್ರಕರಣಗಳ ಸ್ಥಿತಿಗತಿ, ಕಾನೂನು ಸುವ್ಯವಸ್ಥೆ ಕುರಿತು ಸಂಪೂರ್ಣ ಮಾಹಿತಿ ಪಡೆದರು.

ಅವಳಿ ನಗರದಲ್ಲಿ ಹೆಚ್ಚಾಗುತ್ತಿರುವ ಕೆಲವೊಂದು ಅಪರಾಧ ಚಟುವಟಿಕೆಗಳ ಮಾಹಿತಿ ಪಡೆದು ದಂಗು ಬಡೆದರು ಎನ್ನಲಾಗಿದೆ.

ಅಲ್ಲದೆ, ಕೆಲವೊಂದು ಪ್ರಕರಣಗಳ ಕುರಿತು ವಿಶೇಷ ಗಮನ ಹರಿಸಿ ಸೂಕ್ತ ಕ್ರಮ ಜರುಗಿಸುವಂತೆ ಚುರುಕು ಮುಟ್ಟಿಸಿದರು.

ಇದಕ್ಕಾಗಿಯೇ ನಗರದ ಖಾಸಗಿ ಹೋಟೆಲ್ ನಲ್ಲಿ ಸಭೆ ನಡೆಸಿ, ಅವಳಿನಗರದ ಪೊಲೀಸರನ್ನ ನಿದ್ದೆಯಿಂದ ಎಚ್ಚರಿಸೊ ಪ್ರಯತ್ನ ಮಾಡಿದ್ರು,

ಮಾತ್ರವಲ್ದೆ, ಸರಣಿಯಾಗಿ ನಡೆದಿದ್ದ ಕೊಲೆ, ಶೂಟೌಟ್ ಪ್ರಕರಣ ಭೇದಿಸುವ ನಿಟ್ಟಿನಲ್ಲಿ ಕಾಪ್ ಗಳಿಗೆ ಕೆಲ ಸಲಹೆ ಸೂಚನೆಗಳನ್ನೂ ನೀಡಿ, ಕಾನೂನು ಸೂವ್ಯವಸ್ಥೆಯನ್ನ ಕಾಪಾಡುವಂತೆ ವಾರ್ನಿಂಗ್ ಕೂಡ ಮಾಡಿದರು ಎಂದು ತಿಳಿದುಬಂದಿದೆ.

ಇನ್ನೂ ಹುಬ್ಬಳ್ಳಿ ಧಾರವಾಡದಲ್ಲಿ ಅಪರಾಧ ಚಟುವಟಿಕೆಗಳು ಹೆಚ್ಚಳವಾಗುತ್ತಿರುವ ಬಗ್ಗೆ ಬಳಿಕ ಮಾಧ್ಯಮಗಳಿಗೆ ಮಾತನಾಡಿದ ಅವರು, ಬಗ್ಗೆ ಚರ್ಚೆ ಮಾಡಿದ್ದೇನೆ.

ಕೆಲವೊಂದು ಪ್ರಕರಣಗಳು ತನಿಖಾ ಹಂತದಲ್ಲಿವೆ. ಆದಷ್ಟು ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

ಹಿರಿಯ ಅಧಿಕಾರಿಗಳಿಗೂ ಕಾನೂನು ಸುವ್ಯವಸ್ಥಿತೆ ಕಾಪಾಡುವಂತೆ ಸೂಚನೆ ನೀಡಿರುವೆ ಎಂದರು.

ಅಲ್ಲದೆ, ಕೋವಿಡ್ ಸಂದರ್ಭದಲ್ಲಿ ಪೊಲೀಸರು ಪ್ರಾಣದ ಹಂಗು ತೊರೆದು ಕೆಲಸ ಮಾಡಿದ್ದಾರೆ. ಅವರಿಗೆಲ್ಲಾ ಧನ್ಯವಾದಗಳನ್ನ ತಿಳಿಸಲು ರಾಜ್ಯ ಪ್ರವಾಸ ಮಾಡುತ್ತಿರುವೆ.

ಈವರೆಗೆ 6 ಸಾವಿರ ಪೊಲೀಸರಿಗೆ ಕೋವಿಡ್ ಸೊಂಕು ತಗುಲಿದೆ. ಅದರಲ್ಲಿ 40 ಸಿಬ್ಬಂದಿಗಳು ಸಾವನಪ್ಪಿದ್ದಾರೆ ಎಂದು ವಿವರಿಸಿದರು.

ಇನ್ನು ರಾಜ್ಯದಲ್ಲಿ ಪೊಲೀಸ್ ಸಿಬ್ಬಂದಿಗಳ ಕೊರತೆಯಿದೆ. ಸಿಬ್ಬಂದಿಗಳ ಕೊರತೆಯನ್ನ ಜೀರೋ ಲೇವಲ್ ಮಾಡಲು ನೇಮಕಾತಿ ಸಹ ನಡೆಯುತ್ತಿದೆ ಎಂದು ತಿಳಿಸಿದರು.

ಕರೊನಾ ನಂತರ ಅಪರಾಧ ಚಟುವಟಿಕೆಗಳು ಹೆಚ್ಚಳವಾಗುವ ಸಾಧ್ಯತೆಯಿದೆ. ಪೊಲೀಸರು ಸಹ ಇನ್ನೂ ಹೆಚ್ಚಿನ ರೀತಿಯಲ್ಲಿ ಕೆಲಸ ಮಾಡಬೇಕಾಗಿದೆ ಮತ್ತು ಡಯಲ್ 100 ಇನ್ನೂ ಸಾಕಷ್ಟು ಪ್ರಮಾಣದಲ್ಲಿ ಆಕ್ಟಿವ್ ಆಗಬೇಕಿದೆ ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು.

ಒಟ್ಟಾರೆಯಾಗಿ ಬುಧವಾರ ಹುಬ್ಬಳ್ಳಿ-ಧಾರವಾಡದಲ್ಲಿ ನಡೆದ ಪೊಲೀಸ್ ಅಧಿಕಾರಿಗಳ ಸಭೆ ಹಲವರಿಗೆ ಬಿಸಿ ಮೂಡಿಸಿದೆ.

ಜೊತೆಗೆ ಹು-ಧಾ ಮಹಾನಗರ ಪೊಲೀಸ್ ಆಯುಕ್ತ ಆರ್. ದಿಲೀಪ್ ಅವರಿಗೆ ಕಾನೂನು ಸುವ್ಯವಸ್ಥೆ ಇನ್ನು ಬಿಗಿಗೊಳಿಸುವ ಹೆಚ್ಚುವರಿ ಜವಾಬ್ದಾರಿ ಆದ್ರೆ, ಮಾದಕ ಲೋಕದವರಿಗೂ ಈ ಸಭೆ ಖಡಕ್ ಎಚ್ಚರಿಕೆ ನೀಡಿದೆ ಎಂದರೆ ತಪ್ಪಾಗಲಾರದು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *