ರಾಜ್ಯ

ರಾಜ್ಯ ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಡಾ.ಪಿ.ರವೀಂದ್ರನಾಥ್ ರಾಜೀನಾಮೆ

 ರಾಜೀನಾಮೆ ಅಂಗೀಕಾರ ಮಾಡಬೇಡಿ : ಕುಮಾರಸ್ವಾಮಿ

ಬೆಂಗಳೂರು prajakiran.com : ರಾಜ್ಯದ ಬಿಜೆಪಿ ಸರ್ಕಾರ
ಕರ್ತವ್ಯಕ್ಕೆ ಅಡ್ಡಿಪಡಿಸಿ ನಿಯಮಬಾಹಿರ ವರ್ಗಾವಣೆ ಮಾಡಿದ್ದರಿಂದ ಬೇಸತ್ತು ಕರ್ನಾಟಕ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ರಾಜೀನಾಮೆ ನೀಡಿದ್ದಾರೆ.

ಅದನ್ನು ರಾಜ್ಯ ಸರಕಾರ ಅಂಗೀಕಾರ ಮಾಡಬಾರದು.
ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದ ದಲಿತ, ದಕ್ಷ ಅಧಿಕಾರಿ ರವೀಂದ್ರನಾಥ್ ಅವರು ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ತಿಮಿಂಗಿಲಗಳಿಗೆ ಬಲೆ ಹಾಕಿದ್ದರು.

ಹೀಗೆ, ಸರಕಾರ ಮತ್ತು ಸಮಾಜಕ್ಕೆ ವಂಚನೆ ಮಾಡಿದ್ದವರ ಜಾತಕ ಬಿಚ್ಚಿಡಲು ಅವರು ಪ್ರಯತ್ನ ಮಾಡುತ್ತಿದ್ದರು ಎಂದು ಟ್ವೀಟ್ ಮಾಡಿದ್ದಾರೆ.

ಗಣ್ಯ ವ್ಯಕ್ತಿ, ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕತೆಯ ಪೋಸು ಕೊಟ್ಟು ನಕಲಿ ಜಾತಿ ಪ್ರಮಾಣ ಪತ್ರದ ಮೂಲಕ ಹುದ್ದೆ ಗಿಟ್ಟಿಸಿರುವ ಆರೋಪ ಎದುರಿಸುತ್ತಿರುವ ನಿವೃತ್ತ ಅಧಿಕಾರಿಗೆ ನೋಟೀಸ್ ನೀಡಿದ ಹತ್ತೇ ದಿನದಲ್ಲಿ ಆ ನೋಟೀಸ್ ಕೊಟ್ಟ ಹಿರಿಯ ಅಧಿಕಾರಿಯನ್ನೇ ಎತ್ತಂಗಡಿ ಮಾಡಲಾಗಿದೆ ಎಂದು ಕೆಂಪಯ್ಯ ವಿರುದ್ಧ ಪರೋಕ್ಷವಾಗಿ ಕಿಡಿ ಕಾರಿದ್ದಾರೆ

ಈ ಸರಕಾರ ಯಾರ ಬಾಲಂಗೋಚಿ ಎನ್ನುವುದು ಈ ವರ್ಗಾವಣೆ ಒಂದರಿಂದಲೇ ಅರ್ಥವಾಗುತ್ತದೆ. ಏಕೆಂದರೆ, ಆರೋಪಿತ ನಿವೃತ್ತ ಅಧಿಕಾರಿ ಕಾಂಗ್ರೆಸ್ ಸರಕಾರದಲ್ಲಿ ಗೃಹ ಇಲಾಖೆ ಸಲಹೆಗಾರರಾಗಿದ್ದರು.

5 ವರ್ಷ ರಾಜ್ಯವನ್ನಾಳಿದ ಮುಖ್ಯಮಂತ್ರಿಗೆ ಆಪ್ತರೂ ಆಗಿದ್ದರು. ಅವರಿಗೆ ನೋಟೀಸ್ ನೀಡಿದಾಕ್ಷಣ ಡಾ.ರವೀಂದ್ರನಾಥ್ʼರನ್ನು ವರ್ಗಾವಣೆ ಮಾಡಲಾಗಿದೆ ಎಂದು ಆಪಾದಿಸಿದ್ದಾರೆ.

ಹಾಗಾದರೆ, ಬಿಜೆಪಿ & ಕಾಂಗ್ರೆಸ್ ನಡುವೆ ಇರುವ ಒಳ ಒಪ್ಪಂದವೇನು? ಎಂದು ಪ್ರಶ್ನೆ ಮಾಡಿದ್ದಾರೆ.

ಒಬ್ಬ ದಲಿತ ಅಧಿಕಾರಿಯನ್ನು ಬಲಿ ಹಾಕಲು ಎರಡೂ ರಾಷ್ಟ್ರೀಯ ಪಕ್ಷಗಳು ನಡೆಸಿದ ಷಡ್ಯಂತ್ರ ಇದು ಎಂಬುದು ನನ್ನ ನೇರ ಆರೋಪ.

ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲು ಸಹಕಾರ ನೀಡಿದ ನಾಯಕರ ಆಪ್ತರಾಗಿದ್ದ ನಿವೃತ್ತ ಅಧಿಕಾರಿ ವಿರುದ್ಧ ಕೇಳಿಬಂದಿರುವುದು ಅತಿ ಗಂಭೀರ ಆರೋಪ.

ಅಂಥ ವ್ಯಕ್ತಿಯನ್ನು ರಕ್ಷಣೆ ಮಾಡುವ ಅಗತ್ಯ ಬಿಜೆಪಿ ಸರಕಾರಕ್ಕೆ ಏನಿದೆ? ಎಂದು ಗುಡುಗಿದರು.

ಎಲ್ಲಿಂದ, ಯಾರು, ಯಾರ ಮೇಲೆ ಒತ್ತಡ ಹೇರಿದ್ದಾರೆ? ಯಾರು, ಯಾರ ಋಣ ಚುಕ್ತಾ ಮಾಡುತ್ತಿದ್ದಾರೆ ಎನ್ನುವುದು ಜನರಿಗೆ ಗೊತ್ತಾಗಬೇಕಿದೆ ಎಂದು ಒತ್ತಾಯಿಸಿದರು.

ಡಾ.ರವೀಂದ್ರನಾಥ್ ಅವರ ವಿಷಯದಲ್ಲಿ ರಾಜ್ಯ ಸರಕಾರ ನಡೆದುಕೊಳ್ಳುತ್ತಿರುವ ರೀತಿ ಪ್ರಾಮಾಣಿಕ ಅಧಿಕಾರಿಗಳಿಗೆ ದೊಡ್ಡ ಬೆದರಿಕೆ ಎಂದು ವಿವರಿಸಿದರು.

PK Team
prajakiran.com ಹಾಗೂ prajakiran YouTube channel ಯಶಸ್ವಿಯಾಗಿ ಮೂರು ವರ್ಷ ಪೂರೈಸಿ ನಾಲ್ಕನೇ ವಸಂತಕ್ಕೆ ಕಾಲಿಟ್ಟಿದೆ. ನಿಮ್ಮ ನೆಚ್ಚಿನ Prajakiran.com 50 ಲಕ್ಷ ಓದುಗರನ್ನು ಹೊಂದಿದರೆ, Prajakiran ಯೂಟ್ಯೂಬ್ ಚಾನಲ್ 1.25 ಕೋಟಿ ವೀಕ್ಷಕರನ್ನು ಹೊಂದಿದೆ. ಫೇಸ್ ಬುಕ್ ಫೇಜ್ follow/like: Prajakiran News ಐದು ಸಾವಿರ ಗಡಿ ದಾಟಿದೆ. ನಿಮ್ಮ ಪ್ರೀತಿ, ವಿಶ್ವಾಸಕ್ಕೆ ನಾನು ಚಿರ ಋಣಿ. ನಾಗರಾಜ ಕಿರಣಗಿ
http://prajakiran.com

Leave a Reply

Your email address will not be published. Required fields are marked *