ಧಾರವಾಡ prajakiran.com : ಧಾರವಾಡ ಜಿಲ್ಲೆಯ ಕರೋನಾ ಪಾಸಿಟಿವ್ ಪ್ರಕರಣ ದಿನದಿಂದ ದಿನಕ್ಕೆ ಏರುತ್ತಲೇ ಸಾಗಿದೆ. ಸೋಂಕಿತರ ಸಂಖ್ಯೆ ಸೋಮವಾರ ಮತ್ತೆ ಸಾವಿರದ ಗಡಿ ದಾಟಿದೆ.
ಬರೋಬ್ಬರಿ 1006 ಜನರಿಗೆ ಕರೋನಾ ಪಾಸಿಟಿವ್ ಬಂದಿದೆ.
ದುರಂತದ ಸಂಗತಿಯೆಂದರೆ ಇಂದು ಕೂಡ 8 ಸೋಂಕಿತರು ಚಿಕಿತ್ಸೆ ಫಲಿಸದೆ ಸಾವಿಗೀಡಾಗಿದ್ದಾರೆ.
ಹುಬ್ಬಳ್ಳಿಯ ಕಿಮ್ಸ್ ನಲ್ಲಿ 5 ಜನ ಸಾವನ್ನಪ್ಪಿದ್ದರೆ, ಹುಬ್ಬಳ್ಳಿಯ
ಶಕುಂತಲಾ ಆಸ್ಪತ್ರೆ ನಲ್ಲಿ ಒಂದು ಹಾಗೂ ನವಲಗುಂದ ತಾಲ್ಲೂಕಿನ ಆಸ್ಪತ್ರೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ಹೆಲ್ತ್ ಬುಲೆಟಿನ್ ತಿಳಿಸಿದೆ.
ಆತಂಕದ ವಿಚಾರವೆಂದರೆ ಇನ್ನು 368 ಜನ ಸೋಂಕಿತರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 5747ಕ್ಕೆ ಎರಿಕೆ ಆಗಿದೆ.
ಸಮಾಧಾನದ ಸಂಗತಿಯೆಂದರೆ 891
ಸೋಂಕಿತರು ಗುಣಮುಖರಾಗಿ
ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.